ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲ ಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ. ಹಲವರ ಸ್ಥಿತಿ ಗಂಭೀರವಾಗಿದೆ.

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಒಟ್ಟು 11 ಮಂದಿ ಕಪ್ಪೆಚಿಪ್ಪು ತೆಗೆಲು ಹೋಗಿದ್ದರು. ಈ ಪೈಕಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನದಿ ಪ್ರದೇಶದಲ್ಲಿ ಅಪಾರ ಜನರು ಸೇರಿದ್ದು, ಉಳಿದವರಾದ್ರೂ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಇನ್ನೂ ಮೃತಪಟ್ಟ 8 ಮಂದಿಯ ಮೃತದೇಹಗಳನ್ನ ಭಟ್ಕಳ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ – ಪ್ರಕರಣ ದಾಖಲು
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸುನೀಲ್ ನಾಯ್ಕ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
