ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 11 ಜನರ ಪೈಕಿ ಒಂದೇ ಕುಟುಂಬದ 8 ಮಂದಿ ಜಲಸಮಾಧಿಯಾಗಿರುವ ಘಟನೆ ನಡೆದಿದೆ.

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಒಟ್ಟು 11 ಮಂದಿ ಕಪ್ಪೆಚಿಪ್ಪು ತೆಗೆಲು ಹೋಗಿದ್ದರು. ಈ ಪೈಕಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನದಿ ಪ್ರದೇಶದಲ್ಲಿ ಅಪಾರ ಜನರು ಸೇರಿದ್ದು, ಉಳಿದವರಾದ್ರೂ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಇನ್ನೂ ಮೃತಪಟ್ಟ 8 ಮಂದಿಯ ಮೃತದೇಹಗಳನ್ನ ಭಟ್ಕಳ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ – ಪ್ರಕರಣ ದಾಖಲು
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸುನೀಲ್ ನಾಯ್ಕ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
