ಹಾಸನ: ಬಕೆಟ್‌ನಲ್ಲಿ (Bucket) ಬಿದ್ದು 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಹಾಸನ (Hassan) ನಗರದ ವಲ್ಲಭಭಾಯಿ ರಸ್ತೆಯಲ್ಲಿ ನಡೆದಿದೆ.
ಪುಷ್ಪಾಲೋಚನ ಸಾವನ್ನಪ್ಪಿದ ಪುಟ್ಟ ಮಗು. ಪುಷ್ಪಾಲೋಚನ ಗಿರೀಶ್-ಚೈತ್ರಾ ಮೂರನೇ ಪುತ್ರಿಯಾಗಿದ್ದಳು. ಗಿರೀಶ್ ಚಿನ್ನ-ಬೆಳ್ಳಿ ಕೆಲಸ ಮಾಡುತ್ತಿದ್ದು, ದಂಪತಿಗೆ ಮೂವರು ಹೆಣ್ಣುಮಕ್ಕಳು. ಈ ಪೈಕಿ ಪುಷ್ಪಾಲೋಚನ ಮೂರನೆಯವಳು. ಚೈತ್ರಾ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಬಂದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಶಂಕೆ: ನಾಗಲಕ್ಷ್ಮಿ ಚೌಧರಿ ಅನುಮಾನ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್: ಜಾವೆಲಿನ್‌ನಲ್ಲಿ ಭಾರತದ ಮೂವರು ಫೈನಲ್ ಪ್ರವೇಶ
