ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ (Pregnant) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಗುಂತಪನಹಳ್ಳಿ (Guntapanahalli) ಗ್ರಾಮದ ಬಳಿ ನಡೆದಿದೆ.
ಚಿಕ್ಕಬಳ್ಳಾಪುರದ ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ ಮಹಿಳೆ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ 08 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಸಹ ಇತ್ತು. ಆದರೆ ಗಂಡನಿಗೆ ಪ್ಯಾರಾಲಿಸಿಸ್ ಆದ ನಂತರ ಗಂಡನನ್ನು ತೊರದು ತವರು ಮನೆಗೆ ಬಂದು ವಾಸವಾಗಿದ್ದಳು. ಆಗ ಕೂಲಿ ಮಾಡುತ್ತಿದ್ದ ಅನುಷಾಳಿಗೆ ಗುಂತಪನಹಳ್ಳಿ ಗ್ರಾಮದ ಪವನ್ ಪರಿಚಯವಾಗಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದು ಗರ್ಭಿಣಿ ಸಹ ಆಗಿದ್ದಾಳೆ. ಇದರಿಂದ ತನ್ನನ್ನ ಮದುವೆಯಾಗುವಂತೆ ಅನುಷಾ ಒತ್ತಾಯಿಸಿ ಪವನ್ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಬೇರೆ ಬೇರೆ ಜಾತಿ ಎರಡನೇ ಮದುವೆ ಅಂತ ಪವನ್ ಮನೆಯವರು ಇಬ್ಬರಿಗೂ ಬೈದು ಮನೆಗೆ ಕರೆದುಕೊಂಡಿಲ್ಲ. ಇದನ್ನೂ ಓದಿ: ಇದು ಮೋಸದ ಸರ್ಕಾರ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರ್ವಜನಿಕರು ಆಕ್ರೋಶ
Advertisement
Advertisement
15 ದಿನಗಳ ಹಿಂದೆ ಸಹ ಪವನ್ ಊಟದ ಜೊತೆ ಇಲಿ ಪಾಷಾಣ ತಿನ್ನಿಸಿ ಕೊಲೆ ಮಾಡಲು ಯತ್ನಿಸಿದ್ದ ಎಂದು ಆಕೆ ಆರೋಪಿಸಿದ್ದಳು. ಪೊಲೀಸ್ ಠಾಣೆಗೆ ಪವನ್ ವಿರುದ್ಧ ದೂರು ನೀಡಿದ್ದಳು. ತದನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದು ಇಬ್ಬರು ಸಹ ಜೊತೆಯಾಗಿದ್ದಾರೆ. ಕಳೆದ ರಾತ್ರಿ ಗುಂತಪನಹಳ್ಳಿ ಗ್ರಾಮದ ಬಳಿ ಹೊಂಗೆ ಮರದಡಿ ಮದ್ಯಪಾನ ಮಾಡಿ ಮಲಗಿದ್ದರಂತೆ. ಬೆಳಗ್ಗೆ ಎದ್ದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಿಯಕರ ಪವನ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇನ್ನೂ ಪೊಲೀಸರು ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: Mandya| ನಡುರಸ್ತೆಯಲ್ಲೇ ಎಎಸ್‌ಐ ಮೇಲೆ ಹಲ್ಲೆ – ಆರೋಪಿ ಅರೆಸ್ಟ್
Advertisement