ರಾಯ್‍ಪುರ್: ಛತ್ತೀಸ್‍ಗಢದ (Chhattisgarh) ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ (Encounter) 8 ನಕ್ಸಲರು (Naxalites) ಸಾವಿಗೀಡಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ರಾಜ್ಯದ ನಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳಲ್ಲಿ ಭದ್ರತಾ ಸಿಬ್ಬಂದಿಯ ನಕ್ಸಲರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಇಂದು (ಜೂ.15) ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ 8 ನಕ್ಸಲರು ಬಲಿಯಾಗಿದ್ದಾರೆ. ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೀಲ್ ಗಜನ ಪಳಗಿಸಿದ ರಿಯಲ್ ಸಲಗ | ಆಪರೇಷನ್ ’36’ ಸೂಪರ್ ಕಾಪ್ಸ್ – ಸೂಪರ್ ಸ್ಟೋರಿ ಓದಿ
ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಕಾರ್ಯಾಚರಣೆಯನ್ನು ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) 53ನೇ ಬೆಟಾಲಿಯನ್‍ನ ಸಿಬ್ಬಂದಿ ಜೂನ್ 12 ರಂದು ಪ್ರಾರಂಭಿಸಿತ್ತು.
ಅರಣ್ಯದಲ್ಲಿ ಇನ್ನೂ ಹೆಚ್ಚಿನ ನಕ್ಸಲರು ಅಡಗಿರುವ ಶಂಕೆ ಇದ್ದು, ಭದ್ರತಾ ಪಡೆಗಳು ಶೋಧಕಾರ್ಯವನ್ನು ಮುಂದುವರಿಸಿವೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ