LatestMain PostNational

ಮಹಾರಾಷ್ಟ್ರದಲ್ಲಿ ಓಮಿಕ್ರಾನ್‌ ಸ್ಫೋಟ- ಒಂದೇ ದಿನ 8 ಪ್ರಕರಣ ಪತ್ತೆ

ಮುಂಬೈ: ದೇಶದಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ 8 ಪ್ರಕರಣಗಳು ದೃಢಪಟ್ಟಿವೆ. ಆ ಪೈಕಿ 7 ಪ್ರಕರಣಗಳು ಮುಂಬೈನಲ್ಲೇ ಪತ್ತೆಯಾಗಿವೆ.

ಸೋಂಕಿತರಲ್ಲಿ ಯಾರೂ ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿಲ್ಲ. ಇವರಲ್ಲಿ ಒಬ್ಬರು ಬೆಂಗಳೂರು ಹಾಗೂ ಇನ್ನೊಬ್ಬರು ದೆಹಲಿಗೆ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 28ಕ್ಕೆ ಹಾಗೂ ದೇಶದಲ್ಲಿ 57ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: 263 ಪಾಸಿಟಿವ್, 7 ಸಾವು – ಇಂದು 2,25,152 ಜನರಿಗೆ ಲಸಿಕೆ

OMICRON Karnataka

ಸೋಂಕಿತರು 24ರಿಂದ 41 ವರ್ಷದೊಳಗಿನವರಾಗಿದ್ದಾರೆ. ಮೂರು ಮಂದಿಯಲ್ಲಿ ಯಾವುದೇ ರೋಗಲಕ್ಷಣಗಳಿರಲಿಲ್ಲ. ಐವರಲ್ಲಿ ಸೌಮ್ಯ ಲಕ್ಷಣ ಕಂಡುಬಂದಿದೆ. ಅವರಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು ಸೋಂಕಿತರನ್ನು ಹೋಮ್‌ ಐಸೊಲೇಷನ್‌ನಲ್ಲಿ ಇರಿಸಲಾಗಿದೆ.

ರಾಜ್ಯದ ಒಟ್ಟು ಓಮಿಕ್ರಾನ್‌ ಸೋಂಕಿತರಲ್ಲಿ 9 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 19 ಪ್ರಕರಣಗಳು ಸಕ್ರಿಯವಾಗಿವೆ. ಇದನ್ನೂ ಓದಿ: ಕೊರೊನಾ ಭೀತಿ – ಹೊಸವರ್ಷಕ್ಕೆ ತಮಿಳುನಾಡಿನ ಬೀಚ್‍ಗಳಿಗೆ ಪ್ರವೇಶ ನಿರ್ಬಂಧ

ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣ ನಿಯಮಗಳನ್ನು ಮಹಾರಾಷ್ಟ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಅಪಾಯ ಇರುವ ದೇಶಗಳಿಂದ ಬರುವವರು ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಿಸಬೇಕು. ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ತೋರಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

Leave a Reply

Your email address will not be published.

Back to top button