ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರ ಬಂಧನ ವಿಚಾರವಾಗಿ ರಾಜಕೀಯ ಯುದ್ಧ ಏರ್ಪಟ್ಟಿದೆ. ಇದರ ನಡುವೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿವೆ.
ಮುಖ್ಯಮಂತ್ರಿಗಳಾದ ಕೆ.ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿರೋಧ ಪಕ್ಷದ ನಾಯಕರ ಸಹಿ ಇರುವ ಪತ್ರವನ್ನು ಮೋದಿ ಅವರಿಗೆ ಕಳುಹಿಸಲಾಗಿದೆ. ಆದರೆ ಈ ಪತ್ರದಲ್ಲಿ ಕಾಂಗ್ರೆಸ್ ಸಹಿ ಇಲ್ಲ. ಡಿಎಂಕೆ, ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಕೂಡ ಈ ಕ್ರಮಕ್ಕೆ ಕೈಜೋಡಿಸಿಲ್ಲ. ಇದನ್ನೂ ಓದಿ: ಹಿಂಸೆಗೆ ಪ್ರಚೋದನೆ – ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು
Advertisement
Advertisement
ಈ ಕ್ರಮದಿಂದ ಹೊರಗುಳಿದ ಕಾಂಗ್ರೆಸ್ ವಿರುದ್ಧ ಎಎಪಿ ವಾಗ್ದಾಳಿ ನಡೆಸಿದೆ. “ರಾಷ್ಟ್ರೀಯ ಸಮಸ್ಯೆಗಳನ್ನು ಎತ್ತಿದಾಗ ಕಾಂಗ್ರೆಸ್ ಕಣ್ಮರೆಯಾಗುತ್ತದೆ. ಕಾಂಗ್ರೆಸ್ ಎಂದಿಗೂ ಪ್ರತಿಪಕ್ಷಗಳ ಜೊತೆ ನಿಂತಿಲ್ಲ. ಇದು ಅದರ ಇತಿಹಾಸ. ರಾಹುಲ್ ಗಾಂಧಿ ಮತ್ತು ರಾಬರ್ಟ್ ವಾದ್ರಾ ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಬಿಜೆಪಿಯ ಹೇಳಿಕೆಯನ್ನು ನಾವು ಕೇಳುತ್ತಿದ್ದೇವೆ. ಇದು ಕೇವಲ ವಾಗ್ಯುದ್ಧವಾಗಿದೆ. ರಾಷ್ಟ್ರೀಯ ಸಮಸ್ಯೆಗಳು ಬಂದಾಗ ಕಾಂಗ್ರೆಸ್ ತಪ್ಪಿಸಿಕೊಳ್ಳುತ್ತಿದೆ ಎಂದು ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಟೀಕಾಪ್ರಹಾರ ನಡೆಸಿದ್ದಾರೆ.
Advertisement
Advertisement
ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ- ಹೊಣೆ ಹೊತ್ತ ಐಎಸ್‍ಕೆಪಿ
ಪತ್ರದಲ್ಲೇನಿದೆ?
“ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂಬುದನ್ನು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಇದು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂಬುದನ್ನು ಸೂಚಿಸುತ್ತದೆ. ಕೇಂದ್ರೀಯ ತನಿಖಾ ದಳವು (ಸಿಬಿಐ) ಮನೀಶ್ ಸಿಸೋಡಿಯಾ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ. 2014 ರಿಂದ ನಿಮ್ಮ ಆಡಳಿತದಲ್ಲಿರುವ ತನಿಖಾ ಸಂಸ್ಥೆಗಳು ಬುಕ್ ಮಾಡಿದ, ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಪಡಿಸಿದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಂದಿ ವಿರೋಧ ಪಕ್ಷಕ್ಕೆ ಸೇರಿದವರಾಗಿದ್ದಾರೆ. ಬಿಜೆಪಿಗೆ ಸೇರಿದ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧ ತನಿಖಾ ಸಂಸ್ಥೆಗಳು ಮೃದು ಧೋರಣೆ ಹೊಂದಿವೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ.