ತಿರುವನಂತಪುರಂ: ಅಂಬುಲೆನ್ಸ್ ಹಾಗೂ ಲಾರಿಯ ಮಧ್ಯೆ ನಡೆದ ಅಪಘಾತದಿಂದ ಆಸ್ಪತ್ರೆಗೆ ಹೋಗುತ್ತಿದ್ದ ಎಂಟು ಜನರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್ ನಗರದಲ್ಲಿ ನಡೆದಿದೆ.
ಈ ಘಟನೆ ಭಾನುವಾರ ನಡೆದಿದ್ದು, ಕಾರು ಅಪಘಾತದಲ್ಲಿ ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಪಾಲಕ್ಕಾಡ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲೆಂದು ಕರೆದುಕೊಂಡು ಹೋಗಲಾಗುತ್ತಿತ್ತು.
ಹೀಗೆ ಆಸ್ಪತ್ರೆ ಕಡೆ ಹೋಗುತ್ತಿದ್ದ ಅಂಬುಲೆನ್ಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಎಂಟು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Kerala: 8 people died in Thanissery of Palakkad yesterday after the ambulance they were in, collided with a lorry. The people were being taken to a hospital when they got injured, after the car they were earlier travelling in, met with an accident. pic.twitter.com/sB7eEXyfux
— ANI (@ANI) June 10, 2019
ಜನರ ಗುಂಪೊಂದು ಕಾರಿನಲ್ಲಿ ನೆಲ್ಲಿಯಂಪತಿಗೆ ಪ್ರವಾಸಕ್ಕೆ ಹೋಗಿತ್ತು. ದಾರಿ ಮಧ್ಯೆ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಸಣ್ಣ-ಪುಟ್ಟ ಗಾಯಗೊಂಡಿದ್ದ ಗಾಯಾಳುಗಳನ್ನು ನೆನ್ಮರಾದ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪಾಲಕ್ಕಾಡ್‍ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು.
ಈ ವೇಳೆ ಆಂಬುಲೆನ್ಸ್ ಮತ್ತು ಲಾರಿ ಮಧ್ಯೆ ಮತ್ತೆ ಅಪಘಾತ ಸಂಭವಿಸಿದೆ. ಪರಿಣಾಮ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸದ್ಯಕ್ಕೆ ಅಂಬುಲೆನ್ಸ್ ನಲ್ಲಿದ್ದ ಓರ್ವ ಮತ್ತು ಲಾರಿ ಚಾಲಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.