ಕಾರವಾರ: ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು (Seashell) ತೆಗೆಯಲು ಹೋಗಿ ದುರ್ಮರಣಕ್ಕೀಡಾದ 8 ಮಂದಿ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ…
— Siddaramaiah (@siddaramaiah) May 24, 2026
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕಾರವಾರ | ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲಸಮಾಧಿ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (Bhatkal) ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಹೇಳಿದ್ದಾರೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ – ಪ್ರಕರಣ ದಾಖಲು

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, 8 ಜನರು ಮೃತಪಟ್ಟಿದ್ದಾರೆ, ಇಬ್ಬರ ಶವ ಇನ್ನೂ ಸಿಕ್ಕಿಲ್ಲ. ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಗಾಯಳುಗಳ ರಕ್ಷಣೆ ಆಗಿದೆ, ಅವರ ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುತ್ತೆ. ಮೃತರ ಕುಟುಂಬಗ್ಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಅಲ್ಲದೇ ಸಚಿವ ಮಂಕಾಳು ವೈದ್ಯ ಅವರನ್ನು ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
