ರಾಂಚಿ: ಕೇಂದ್ರ ಪಡೆಗಳು ನಕ್ಸಲರ ವಿರುದ್ಧ ನಡೆಸಿದ ದಾಳಿಯಲ್ಲಿ ಭಾರಿ ಪ್ರಗತಿ ಸಾಧಿಸಿದ್ದು, ಜಾರ್ಖಂಡ್‌ನ (Jharkhand) ಬೊಕಾರೊದಲ್ಲಿ (Bokaro) ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಸದೆಬಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (CoBRA) ಕಮಾಂಡೋಗಳ ಅರಣ್ಯ ಯುದ್ಧ ಘಟಕ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದರು. ಇದನ್ನೂ ಓದಿ: ಒಂದು ವಾರದಿಂದ ಬೆದರಿಕೆ – ಪುತ್ರನಿಂದ ದೂರು, ಓಂ ಪ್ರಕಾಶ್ ಪತ್ನಿ ಅರೆಸ್ಟ್
ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಪತ್ತೆಗೆ ಸರ್ಕಾರವು 1 ಕೋಟಿ ರೂ. ಬಹುಮಾನ ಫೋಷಿಸಿತ್ತು. ಇದೀಗ ಕೇಂದ್ರ ಮೀಸಲು ಪೊಲೀಸ್ ಪಡೆ ಆತನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಚರಣೆ ವೇಳೆ 2 ಐಎನ್‌ಎಸ್‌ಎಎಸ್ ರೈಫಲ್‌ಗಳು, 1 ಸೆಲ್ಫ್ ಲೋಡಿಂಗ್ ರೈಫಲ್ ಮತ್ತು 1 ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಲವ್ವರ್ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ
ಏಪ್ರಿಲ್ ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಹಿಂಸೆಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಹೇಳಿ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸುವಂತೆ ಕರೆ ನೀಡಿದ್ದರು. ಛತ್ತೀಸ್‌ಗಢದಲ್ಲಿ ನಕ್ಸಲ್ ಮುಕ್ತ ಎಂದು ಘೋಷಿಸಲಾದ ಎಲ್ಲಾ ಗ್ರಾಮಗಳಿಗೆ ಅಭಿವೃದ್ಧಿ ನಿಧಿಯಾಗಿ 1 ಕೋಟಿ ರೂ.ಗಳನ್ನು ಘೋಷಿಸಿದ ಅವರು, ಶರಣಾದ ನಕ್ಸಲರು ಸರ್ಕಾರದ ಸಹಾಯದಿಂದ ಸುರಕ್ಷಿತ ಮತ್ತು ಗೌರವಾನ್ವಿತ ಜೀವನವನ್ನು ನಡೆಸುತ್ತಾರೆ ಎಂದು ಭರವಸೆ ನೀಡಿದರು.