ಚೆನ್ನೈ: ರಸ್ತೆ ಅಪಘಾತದಲ್ಲಿ (Road Accident) ಶಬರಿಮಲೆಯಿಂದ (Sabarimala) ಹಿಂದಿರುಗುತ್ತಿದ್ದ 8 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ತೇಣಿ ಜಿಲ್ಲೆಯ ಕುಮುಲಿ ಮೌಂಟೇನ್ ಪಾಸ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 8 ಭಕ್ತರು (Pilgrims) ಸಾವನ್ನಪ್ಪಿದ್ದಾರೆ. ಇನ್ನುಳಿದ ಮಗು ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಎಲ್ಲಾ ಪ್ರಯಾಣಿಕರು ಥೇಣು ಆಂಡಿಪೆಟ್ಟಿಯ ಮೂಲದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ
Deeply Saddened by the demise of Sabarimala pilgrims in an accident in Idukki.
Heartfelt condolences to the families of the bereaved. Praying for the speedy and full recovery of the injured.
— V Muraleedharan / വി മുരളീധരൻ (@VMBJP) December 24, 2022
ಘಟನೆಗೆ ಸಂಬಂಧಿಸಿ ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ ಮುರಳೀಧರನ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ – ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ