ತಿರುವನಂತಪುರಂ: ಪ್ರಾಥಮಿಕ ಶಾಲೆಯೊಂದಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡ 8 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆ ಸಂಬಂಧ ವರದಿ ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಆಹಾರ ಸುರಕ್ಷತಾ ಆಯುಕ್ತರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಕೇರಳದ ಅಲಪ್ಪುಳ ಜಿಲ್ಲೆಯ ಕಾಯಂಕುಲಂನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನದ ಊಟದ ನಂತರ ಶಾಲೆಯಲ್ಲಿ ಸುಮಾರು 18 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಳಿಕ ಶಾಲೆಗೆ ಭೇಟಿ ನೀಡಿದ ಆರೋಗ್ಯ ಇಲಾಖೆ ಅಧಿಕಾರಿಗಳು ಆಹಾರ ಮತ್ತು ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಪ್ರೀತಿಸಿ 4 ತಿಂಗಳ ಹಿಂದೆಯಷ್ಟೇ ಮದ್ವೆಯಾಗಿದ್ದ ಮಹಿಳಾ ಎಂಜಿನಿಯರ್ ಆತ್ಮಹತ್ಯೆ
ಇದೇ ರೀತಿ ಮೇ 2 ರಂದು ಕೇರಳದ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಪಟ್ಟಣದ ಆಹಾರ ಮಳಿಗೆಯೊಂದರಲ್ಲಿ ಕೆಟ್ಟುಹೋಗಿದ್ದ ಶವರ್ಮಾ ರೋಲ್ ಸೇವಿಸಿ 17 ವರ್ಷದ ಶಾಲಾ ಬಾಲಕಿ ಸಾವನ್ನಪ್ಪಿದ್ದು, 18 ಮಂದಿ ಅಸ್ವಸ್ಥಗೊಂಡಿದ್ದಾರೆ. ಈ ಘಟನೆ ಕುರಿತಂತೆ ಸಹ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತನಿಖೆಗೆ ಆದೇಶಿಸಿದ್ದು, ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳಾಗ್ತಿಲ್ಲವೆಂದು ಸೊಸೆ ಕೋಣೆಗೆ ಇಬ್ಬರು ಪುತ್ರರನ್ನು ಬಿಟ್ಟ ಪಾಪಿ ಅತ್ತೆ!