ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಎಂಜಿನಿಯರಿಂಗ್ ಕಾಲೇಜಿನ ಲಿಫ್ಟ್ ಕುಸಿದಿರುವ ಪರಿಣಾಮ, 8 ವಿದ್ಯಾರ್ಥಿಗಳಿಗೆ ಗಾಯಗೊಂಡು ಮೂವರ ಸ್ಥಿತಿ ಗಂಭೀರವಾಗಿದೆ.
ಬುಧವಾರ ಗಾಜಿಯಾಬಾದ್‌ನ ಕವಿನಗರದ ಬಳಿ ಇರುವ ಐಎಮ್‌ಎಸ್ ಕಾಲೇಜಿನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಗಳು ಲಿಫ್ಟ್ ಮುಖಾಂತರ ಕಾಲೇಜಿನ ಮಹಡಿ ಏರುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಮುರಿದು ಕೆಳಗೆ ಬಿದ್ದಿದೆ. ಘಟನೆ ನಡೆದ ತಕ್ಷಣ ಕಾಲೇಜಿನ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಲಿಫ್ಟ್‌ನಿಂದ ಹೊರ ತೆಗೆದಿದ್ದಾರೆ. ಇದನ್ನೂ ಓದಿ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
Advertisement
Advertisement
ಲಿಫ್ಟ್‌ನಲ್ಲಿದ್ದ 8 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗಳಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನೂ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ
Advertisement