Sunday, 22nd July 2018

Recent News

ಪ್ರವಾಸ ಹೋಗಲು ಪೋಷಕರು ಅನುಮತಿ ನೀಡದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಂತಾಮಣಿ ತಾಲೂಕು ಇರಗಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಪ್ರವಾಸ ಹೋಗಲು ಪೋಷಕರು ಅನುಮತಿ ನೀಡದ ಹಿನ್ನೆಲೆಯಲ್ಲಿ ಸುಧಾಕರ್ (14) ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

 

ಅಜ್ಜಿ ಮನೆಯಲ್ಲಿದ್ದುಕೊಂಡು ಸ್ಥಳೀಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಧಾಕರ್, ಶಾಲೆಯಿಂದ ಎಲ್ಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ತನ್ನನ್ನು ಕೂಡ ಪ್ರವಾಸಕ್ಕೆ ಕಳುಹಿಸುವಂತೆ ಪೀಡಿಸಿದ್ದಾನೆ. ಆದ್ರೆ ಮನೆಯವರು ಸುಧಾಕರ್ ಆಸೆಗೆ ಅಡ್ಡಿಪಡಿಸಿದ್ದಾರೆ. ತನ್ನನ್ನು ಪ್ರವಾಸಕ್ಕೆ ಕಳುಹಿಸಲು ನಿರಾಕರಿಸಿದ್ದಕ್ಕೆ ಬೇಸರಗೊಂಡ ಸುಧಾಕರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನೂ ವಿದ್ಯಾರ್ಥಿಯ ತಾಯಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *