ಶಿವಮೊಗ್ಗ: ಸಾಗರ (Sagara) ತಾಲೂಕಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಕಡಜ ಹುಳ ಕಡಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿಶ್ಚಿತ್ (8) ಮೃತಪಟ್ಟ ಬಾಲಕ. 2ನೇ ತರಗತಿ ಓದುತ್ತಿದ್ದ. ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಡಜದ ಹುಳುವಿನ ಗೂಡು ಇತ್ತು. ತಂದೆ ವೆಂಕಟೇಶ್ ಹಾಗೂ ಬಾಲಕ ನಿಶ್ಚಿತ್ ಮೇಲೆ ಕಡಜದ ಹುಳುಗಳು ದಾಳಿ ನಡೆಸಿದ್ದವು.
ತಕ್ಷಣವೇ ಹೆಗ್ಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರನ್ನೂ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ತಂದೆ-ಮಗನನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಚಿಕಿತ್ಸೆ ಫಲಿಸದೇ ಬಾಲಕ ನಿಶ್ಚಿತ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.
ತಂದೆ ವೆಂಕಟೇಶ್‌ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

