ಲಕ್ನೋ: ಉಯ್ಯಾಲೆಯ ಹಗ್ಗಕ್ಕೆ ಸಿಲುಕಿ ಎಂಟು ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಸ್ರೇಹಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ಅರ್ಜುನ್ ಮನೆಯ ಕೊಠಡಿಯೊಂದರಲ್ಲಿ ಹಗ್ಗದಲ್ಲಿ ಉಯ್ಯಾಲೆ ಮಾಡಿಕೊಂಡು ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್‍ಎಚ್‍ಒ ಉಮಾಕಾಂತ್ ಓಜಾ ತಿಳಿಸಿದ್ದಾರೆ. ಇದನ್ನೂ ಓದಿ: ತಲೆ ಮೇಲೆ ಮದ್ಯದ ಬಾಟಲಿ ಹಿಡಿದು ನಡುರಸ್ತೆಯಲ್ಲಿ ಆಂಟಿ ಡ್ಯಾನ್ಸ್..!
ಅರ್ಜುನ್ ಕೊಠಡಿಯಲ್ಲಿ ಕೆಲವು ಗೋಧಿ ಚೀಲಗಳನ್ನು ಒಂದರ ಮೇಲೊಂದರಂತೆ ಜೋಡಿಸಿ ನಂತರ ಅದರ ಮೇಲೆ ನಿಂತು ಫ್ಯಾನ್‍ಗೆ ಹಗ್ಗವನ್ನು ನೇತು ಹಾಕಿದ್ದಾನೆ. ಬಳಿಕ ತೂಗಾಡಲು ಆರಂಭಿಸಿದಾಗ, ಕೆಳಗೆ ಇದ್ದ ಗೋಣಿಚೀಲಗಳು ಚೆಲ್ಲಾಪಿಲ್ಲಿಯಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬಾಲಕನ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ನಂತರ ನೇಣು ಬಿಗಿದಂತೆ ಪತ್ತೆಯಾದ ಬಾಲಕನನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇದೀಗ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: 20 ವರ್ಷದ ಹುಡುಗಿ ಅಂತ 50ರ ಆಂಟಿ ತುಂಟಾಟ – ಚಾಟ್ ಮಾಡಿ ಮೋಸ ಹೋದ ಯುವಕ