ಆಟವಾಡ್ತಿದ್ದಾಗ ಕಾರಿನ ಡೋರ್ ಲಾಕ್- 8 ವರ್ಷದ ಬಾಲಕಿ ದುರ್ಮರಣ

Public TV
1 Min Read
CAR

ಹೈದರಾಬಾದ್: 8 ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಕಾರಿನೊಳಗೆ ಸಿಲುಕಿಕೊಂಡು ಉಸಿರುಗಟ್ಟಿ ಮೃತಪಟ್ಟ ಘಟನೆ ಆಂಧ್ರಪ್ರದೇಶ (Andhrapradesh) ದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿ ಇಂದು (ಸೋಮವಾರ) ಕಾರಿ (Car) ನೊಳಗೆ ತನ್ನ ಪಾಡಿಗೆ ಆಟವಾಡುತ್ತಿದ್ದಳು. ಈ ವೇಳೆ ಕಾರಿನ ಡೋರ್ ಲಾಕ್ ಆಗಿ ಬಾಲಕಿ (Girl) ಒಳಗೆ ಸಿಲುಕಿಕೊಂಡಿದ್ದಾಳೆ. ಪರಿಣಾಮ ಉಸಿರಾಡಲು ಸಾಧ್ಯವಾಗದೇ ದುರ್ಮರಣಕ್ಕೀಡಾಗಿದ್ದಾಳೆ. ಇದನ್ನೂ ಓದಿ: ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ ; ಮೂವರು ಯುವಕರು ಸಾವು

hospital

ಇತ್ತ ಸಂಜೆಯಾದರೂ ಬಾಲಕಿ ಕಾಣದೆ ಇದ್ದಾಗ ಆಕೆಯ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಎಲ್ಲಾ ಕಡೆ ಹುಡುಕಾಡಿದರೂ ಬಾಲಕಿ ಕಾಣಿಸಲಿಲ್ಲ. ಕೊನೆಗೆ ಮನೆ ಪಕ್ಕ ನಿಲ್ಲಿಸಿದ್ದ ಕಾರನ್ನು ಚೆಕ್ ಮಾಡಿದ್ದಾರೆ. ಈ ವೇಳೆ ಬಾಲಕಿ ಕಾರಿನೊಳಗೆ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಉಸಿರುಗಟ್ಟಿ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಬಾಲಕಿಯ ತಂದೆ ನಿಧನ ಹೊಂದಿದ್ದರು. ಸದ್ಯ ಮೃತಪಟ್ಟ ಬಾಲಕಿ ತನ್ನ 11 ವರ್ಷದ ಸಹೋದರನ ಜೊತೆ ತಾಯಿಯೊಂದಿಗೆ ವಾಸವಾಗಿದ್ದಳು. ಪತಿ ತೀರಿಕೊಂಡ ದುಃಖದಲ್ಲಿದ್ದ ಆದಿಲಕ್ಷ್ಮಿಗೆ ಗ್ರಾಮಸ್ಥರು ಸಾಂತ್ವನ ಹೇಳುತ್ತಿದ್ದಂತೆಯೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.

Share This Article