ಲಕ್ನೋ: ಎಂಟು ವರ್ಷದ ಬಾಲಕಿಯ ಮೇಲೆ ಶಿಕ್ಷಕ ಮತ್ತು ಶಾಲೆಯ ಮ್ಯಾನೇಜರ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಬಾಲಕಿ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಶಾಲೆಯಿಂದ ಮನೆಗೆ ಬಂದ ನಂತರ ಬಾಲಕಿ ನಡೆದ ಘಟನೆಯನ್ನೆಲ್ಲಾ ಪೋಷಕರಿಗೆ ವಿವರಿಸಿದ್ದಾಳೆ. ಬಳಿಕ ಬಾಲಕಿ ಪೋಷಕರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ : ನಂದಿಬೆಟ್ಟ, ಚಾಮುಂಡಿ ಬೆಟ್ಟ, ಮುಳ್ಳಯ್ಯನಗಿರಿಯಲ್ಲಿ ರೋಪ್ ವೇ
ಈ ಸಂಬಂಧ ಸರ್ಕಲ್ ಅಧಿಕಾರಿ ಕುಲದೀಪ್ ಸಿಂಗ್ ಅವರು, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವರದಿಯಲ್ಲಿ ಅತ್ಯಾಚಾರವನ್ನು ದೃಢಪಟ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ