ಕಾರವಾರ: ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ತೆರಳಿದ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ವೈರ್ ತಾಗಿ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಎರಡನೇ ತರಗತಿ ಓದುತ್ತಿದ್ದ ಸಾನ್ವಿ ಬಸವರಾಜ ಗೌಳಿ (8) ಸ್ಥಳದಲ್ಲೇ ಸಾವು ಕಂಡ ಬಾಲಕಿಯಾಗಿದ್ದಾಳೆ. ಶಾಲೆಯ ಆವರಣದ ಶೌಚಾಲಯದ ಬಳಿಯೇ ಬೋರ್ವೆಲ್ ತೆಗೆಸಲಾಗಿದ್ದು, ಇದಕ್ಕೆ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಇದನ್ನೂ ಓದಿ: ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ
Advertisement
Advertisement
ಮುಖ್ಯ ಲೈನ್ನಿಂದ ಪಡೆದಿದ್ದ ತಂತಿ ತುಂಡಾಗಿ ಶೌಚಾಲಯದಲ್ಲಿ ಬಿದ್ದಿದ್ದು, ಬಾಲಕಿ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಶಾಕ್ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಶಾಲೆಯ ಮುಖ್ಯ ಶಿಕ್ಷಕರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಲ್ಲದೇ ವಿದ್ಯುತ್ ವೈರ್ ತುಂಡಾದರೂ ನಿರ್ಲಕ್ಷ ವಹಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
Advertisement
Advertisement
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪ್ರವೀಣ ಹುಚ್ಚನ್ನವರ್, ಸಿಪಿಐ ಜಯವಂತ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಸಹ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: 20ರ ಯುವತಿಯನ್ನ ಪ್ರೀತಿಸಿ ಮದ್ವೆಯಾಗಿದ್ದಕ್ಕೆ 40 ವರ್ಷದ ವ್ಯಕ್ತಿಯ ಕೊಲೆ – 6 ಮಂದಿ ಅರೆಸ್ಟ್