ಅಮರನಾಥ ಯಾತ್ರೆ: ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರೋ 80 ಮಂದಿ ಕನ್ನಡಿಗರು

Public TV
1 Min Read
amaranath yatra gadag people

– ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ

ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ (Amaranath Yatra) ತೆರಳಿದ್ದ 80 ಮಂದಿ ಕನ್ನಡಿಗರು (Kannadigas) ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಿ ಕರೆತರಲು ಅಗತ್ಯ ಎಲ್ಲಾ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗದಗದಿಂದ (Gadag) ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್‌ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿದ್ದರಾಮಯ್ಯ ಘೋಷಣೆ

amaranath yatra 5 1

ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆ ಮಧ್ಯೆ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.

ಮಿಲಿಟರಿ ಪಡೆಯಿಂದ ಯಾತ್ರಿಕರನ್ನು ಮರಳಿ ಕರೆತರಲು ಪ್ರಯತ್ನಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾತ್ರಿಗಳ ಸಹಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಕೆಜಿ ಟೊಮೆಟೊಗೆ 200 ರೂ., ಮೆಣಸಿನಕಾಯಿಗೆ 170 ರೂ. – ತರಕಾರಿಗಳ ಬೆಲೆ ಭಾರೀ ದುಬಾರಿ!

ಕೇಂದ್ರ ಸರ್ಕಾರದ ವಿಶೇಷ ಪ್ರತಿನಿಧಿಗಳು ಹಾಗೂ ಮಿಲಿಟರಿ ಪಡೆ ಸಹಾಯ ಕೋರಲಾಗಿದೆ ಎಂದು ಗದಗ ಜಿಲ್ಲಾ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ ತಿಳಿಸಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article