ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ (80th Independence Day) ಸಂಭ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನ ವಿಧಾನಸೌಧದ (Vidhana Soudha) ಮುಂಭಾಗ ಇಂದು ಅದ್ಧೂರಿ `ಫ್ರೀಡಂ ಹಬ್ಬ’ (Freedom Habba) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 10 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಶಾಲಾ ಮಕ್ಕಳಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ತಮ್ಮ ಪ್ರತಿಭಾ ಪ್ರದರ್ಶನದ ಮೂಲಕ ಸ್ವಾತಂತ್ರ್ಯ ಉತ್ಸವಕ್ಕೆ ರಂಗು ತುಂಬಿದರು. ಇದನ್ನೂ ಓದಿ: ಹರ್ ಘರ್ ತಿರಂಗಾ – ಹರ್ ಮನ್ ತಿರಂಗಾಕ್ಕೆ ಪ್ರೇರಣೆಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮಧ್ಯಾಹ್ನ 3ರಿಂದ 5:30ರವರೆಗೆ ವಿಧಾನಸೌಧ ಮತ್ತು ಹೈಕೋರ್ಟ್ ಮಧ್ಯದ ಅಂಬೇಡ್ಕರ್ ರಸ್ತೆಯಲ್ಲಿ `ಫ್ರೀಡಂ ಪರೇಡ್’ ನಡೆಯಲಿದೆ. ವಿಧಾನಸೌಧದ ಮುಂಭಾಗದ ಐಪಿಒ ಸರ್ಕಲ್‌ನಿಂದ ಆರಂಭವಾದ ಈ ಪರೇಡ್ ತಿಮ್ಮಯ್ಯ ವೃತ್ತದವರೆಗೆ ಸಾಗಲಿದೆ. ಈ ಪರೇಡ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 15 ತಂಡಗಳು ಹಾಗೂ ವಿವಿಧ ರಾಜ್ಯಗಳ 10 ಪ್ರಮುಖ ಕಲಾತಂಡಗಳು ತಮ್ಮ ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸಲಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಗೆ ಪಕ್ಷಭೇದ ಮರೆತು ಬೆಂಬಲಿಸಿ: ಮೋದಿ
ಸಂಜೆ 5:30ರಿಂದ ಅದ್ಧೂರಿ `ಸಂಗೀತ ರಸಸಂಜೆ’ ಆರಂಭವಾಗಲಿದೆ. ರಾತ್ರಿ 10 ಗಂಟೆಯವರೆಗೆ ಸಂಗೀತ, ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. ಖ್ಯಾತ ಗಾಯಕರಾದ ಎಂ.ಡಿ. ಪಲ್ಲವಿ, ಸಂಜಿತ್ ಹೆಗ್ಡೆ, ರಘು ದೀಕ್ಷಿತ್ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಪ್ರಖ್ಯಾತ ಕಲಾವಿದರು ಗಾಯನದ ಮೂಲಕ ಜನರನ್ನು ರಂಜಿಸಲಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಯನ್ನೇ ಮರೆತ ಅಧಿಕಾರಿಗಳು – ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಲಕ್ಷ್ಯ!
