ನವದೆಹಲಿ: ಹಿಮಾಚಲ ಪ್ರದೇಶ (Himachal Pradesh) ಮತ್ತು ಉತ್ತರಾಖಂಡದಲ್ಲಿ (Uttarakhand) ನಿರಂತರ ಮಳೆ (Rain) ಮತ್ತು ಭೂಕುಸಿತದಿಂದ (Landslide) ಸಾವನ್ನಪ್ಪಿದವರ ಸಂಖ್ಯೆ 81ಕ್ಕೆ ಏರಿದೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಭೂ ಕುಸಿತ ಮತ್ತು ಮನೆ ಕುಸಿತದ ಅವಶೇಷಗಳಿಂದ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಈ ದುರಂತದ ನಡುವೆಯೇ ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಬಹುತೇಕ ಮೃತದೇಹಗಳು ಪತ್ತೆಯಾಗಿವೆ. ಕಳೆದ 3 ದಿನಗಳಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ. ಭಾನುವಾರ ರಾತ್ರಿಯಿಂದ ಒಟ್ಟು 57 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.
Advertisement
Advertisement
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಮಾಹಿತಿ ಪ್ರಕಾರ, ಜೂನ್ 24 ಮುಂಗಾರು ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಒಟ್ಟು 214 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಮತ್ತು 38 ಜನರು ನಾಪತ್ತೆಯಾಗಿದ್ದಾರೆ. ಸಮ್ಮರ್ ಹಿಲ್ ಮತ್ತು ಕೃಷ್ಣ ನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಮ್ಮರ್ ಹಿಲ್ ಸೈಟ್‌ನಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ.
Advertisement
ಕಳೆದ 24 ಗಂಟೆಗಳಲ್ಲಿ ಕಾಂಗ್ರಾ ಜಿಲ್ಲೆಯ ಇಂದೋರಾ ಮತ್ತು ಫತೇಪುರ್ ಉಪವಿಭಾಗಗಳ ಪ್ರವಾಹ ಪೀಡಿತ ಪ್ರದೇಶಗಳಿಂದ 1,731 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿಪುನ್ ಜಿಂದಾಲ್ ಬುಧವಾರ ತಿಳಿಸಿದ್ದಾರೆ. ವಾಯುಪಡೆಯ ಹೆಲಿಕಾಪ್ಟರ್‌ಗಳು, ಸೇನಾ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ನೆರವಿನೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಂದಾಲ್ ಹೇಳಿದರು. ಇದನ್ನೂ ಓದಿ: ಮಣಿಪುರ ಹಿಂಸಾಚಾರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ
Advertisement
ಹಿಮಾಚಲ ಪ್ರದೇಶವು ಈ ವರ್ಷ 54 ದಿನಗಳ ಮಾನ್ಸೂನ್‌ನಲ್ಲಿ ಈಗಾಗಲೇ 742 ಮಿಮೀ ಮಳೆಯನ್ನು ದಾಖಲಿಸಿದೆ. ಜೂನ್ 1 ರಿಂದ ಸೆಪ್ಟೆಂಬರ್ 30ರ ನಡುವೆ ಸರಾಸರಿ 730 ಮಿಮೀ ಮಳೆ ದಾಖಲಾಗಿದೆ. ಈ ಜುಲೈನಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಮಳೆಯು ಕಳೆದ 50 ವರ್ಷಗಳಲ್ಲಿ ತಿಂಗಳ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ಶಿಮ್ಲಾ ಹವಾಮಾನ ಕೇಂದ್ರದ ನಿರ್ದೇಶಕ ಸುರೀಂದರ್ ಪಾಲ್ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆ:
ಭೂಕುಸಿತ ಸಂಭವಿಸಿದ ಉತ್ತರಾಖಂಡದ ಲಕ್ಷ್ಮಣ್ ಜುಲಾದಲ್ಲಿನ ರೆಸಾರ್ಟ್ನಲ್ಲಿ ದಂಪತಿ ಮತ್ತು ಅವರ ಮಗ ಸೇರಿದಂತೆ 4 ಶವಗಳನ್ನು ಅವಶೇಷಗಳಿಂದ ವಶಪಡಿಸಿಕೊಳ್ಳಲಾಗಿದೆ. 2 ಮೃತದೇಹಗಳನ್ನು ಮಂಗಳವಾರ ತಡರಾತ್ರಿ ಮತ್ತು ಇನ್ನೆರಡು ಮೃತದೇಹಗಳನ್ನು ಬುಧವಾರ ಹೊರ ತೆಗೆಯಲಾಗಿದೆ. ಈ 4 ಮೃತದೇಹಗಳು ಪತ್ತೆಯಾಗುವ ಮೂಲಕ ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದೆ.
ಅಮ್ಸೌರ್‌ನಲ್ಲಿ ಭೂಕುಸಿತದ ಅವಶೇಷಗಳಿಂದ ಪೌರಿ-ಕೋಟ್‌ದ್ವಾರ-ದುಗಡ್ಡಾ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸುವುದರೊಂದಿಗೆ ಸಂಚಾರ ಅಸ್ತವ್ಯಸ್ತಗೊಂಡಿತು. ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗವು ಪಿಪಾಲ್ಕೋಟಿ ಭರೆನ್ಪಾನಿ ಬಳಿ ಕೊಚ್ಚಿಹೋಗಿದೆ ಎಂದು ರಾಜ್ಯದ ವಿಪತ್ತು ನಿಯಂತ್ರಣ ಕೊಠಡಿ ತಿಳಿಸಿದೆ. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ
ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ:
ಪಾಂಗ್ ಮತ್ತು ಭಾಕ್ರಾ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ಬಳಿಕ ಹೋಶಿಯಾರ್‌ಪುರ, ಗುರುದಾಸ್‌ಪುರ ಮತ್ತು ರೂಪನಗರ ಜಿಲ್ಲೆಗಳ ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕ್ರಮವಾಗಿ 1,677 ಅಡಿ ಮತ್ತು 1,398 ಅಡಿಗಳಲ್ಲಿದೆ ಎಂದು ತಿಳಿಸಿದರು.
Web Stories