ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ (BMTC) 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಗೆ 82%ರಷ್ಟು ಮಂದಿ ಹಾಜರಾಗಿದ್ದರು ಎಂದು ಕೆಇಎ (KEA) ತಿಳಿಸಿದೆ.
ಬೆಂಗಳೂರು, ಬಳ್ಳಾರಿ, ಧಾರವಾಡ, ಕಲಬುರಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳ ಒಟ್ಟು 50 ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಂಸ್ಕೃತ ಬರದಿದ್ರೆ ದೇವಲೋಕಕ್ಕೆ ವೀಸಾ ಇಲ್ಲ: ಚರ್ಚೆಗೆ ಗ್ರಾಸವಾದ ಪುತ್ತಿಗೆ ಶ್ರೀ ಹೇಳಿಕೆ
Advertisement
Advertisement
ಒಟ್ಟು 23,023 ಮಂದಿ ಅರ್ಜಿ ಸಲ್ಲಿಸಿದ್ದರು. ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆದ ಪರೀಕ್ಷೆಗೆ 82%ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಸನ್ನ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2 ತಿಂಗಳ ಒಳಗಡೆ ಕೆಪಿಎಸ್ಸಿ ಮರು ಪರೀಕ್ಷೆ – ಅಧಿಕಾರಿಗಳು ಅಮಾನತು: ಸಿಎಂ ಘೋಷಣೆ
Advertisement