ಇಂದು 826 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ

Advertisements

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಳಿತ ಕಾಣುತ್ತಿದೆ. ಕಳೆದ ಎರಡು ದಿನಗಳಿಂದ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡಿದೆ. ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.

Advertisements

ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 746 ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6,248ಕ್ಕೆ ಏರಿಕೆ ಕಂಡಿದೆ. ಇಂದು ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ದಾಖಲಾದ 17 ಪ್ರಕರಣ ಜಿಲ್ಲೆಗಳ ಪೈಕಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.25ಕ್ಕೆ ತಲುಪಿದೆ. ಈವರೆಗೆ ಒಟ್ಟು 40,077 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸ್ವಂತ ಮಗಳ ಕೆನ್ನೆ, ಎದೆಯ ಭಾಗಕ್ಕೆ ಕಚ್ಚಿದ ತಂದೆ

Advertisements

ಇಂದು 600 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,72,285 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,25,500 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 4,489 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 25,348 ಸ್ಯಾಂಪಲ್ (ಆರ್​ಟಿಪಿಸಿಆರ್ 18,055 + 7,293 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಮ್ಮ ರಕ್ತದಲ್ಲಿ ಕಾಂಗ್ರೆಸ್‌ ಇದೆ: JDS ತೊರೆದು ಕಾಂಗ್ರೆಸ್‌ ಸೇರಿದ ಹೆಚ್‌.ಆರ್.ಶ್ರೀನಾಥ್‌

Advertisements

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಳ್ಳಾರಿ 7, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 746, ಬೀದರ್ 1, ದಕ್ಷಿಣ ಕನ್ನಡ 12, ಹಾಸನ 4, ಹಾವೇರಿ 3, ಕಲಬುರಗಿ 1, ಕೋಲಾರ 2, ಕೊಪ್ಪಳ 1, ಮಂಡ್ಯ 3, ಮೈಸೂರು 17, ರಾಮನಗರ 4, ಶಿವಮೊಗ್ಗ 3, ತುಮಕೂರು 4, ಉಡುಪಿ 8, ಉತ್ತರ ಕನ್ನಡ 2, ಧಾರವಾಡ 3, ಬಾಗಲಕೋಟೆ, ಗದಗ, ಕೊಡಗು, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Live Tv

Advertisements
Exit mobile version