ಮುಂಬೈ: ಬಾಲಿವುಡ್ ನಟ ರಣ್ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 83 ಸಿನಿಮಾ ಟ್ರೇಲರ್ ರಿಲೀಸ್ ಆಗಿದ್ದು, ಅಭಿಮಾನಿಗಳು ಟ್ರೇಲರ್ ನೋಡಿ ಫುಲ್ ಫಿದಾ ಆಗಿದ್ದಾರೆ.
ಕೊರೊನಾ ವೈರಸ್ ಕಾರಣಾಂತರದಿಂದ ಬಿಡುಗಡೆಗೆ ತಡವಾಗಿದ್ದ ಈ ಚಿತ್ರ ಕ್ರಿಸ್ಮಸ್ ಹಬ್ಬದಂದು ತೆರೆ ಮೇಲೆ ಬರಲಿದೆ. ಸದ್ಯ 83 ಚಿತ್ರದ ಟ್ರೇಲರ್ ಅನ್ನು ರಣ್ವೀರ್ ಸಿಂಗ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. 3 ನಿಮಿಷ 49 ಸೆಕೆಂಡ್ ಇರುವ ಈ ಟ್ರೇಲರ್ ಪ್ರೇಕ್ಷಕರನ್ನು 1983ಕ್ಕೆ ಕರೆದೊಯ್ಯುವಂತಿದ್ದು, ಭಾರತೀಯ ಕ್ರಿಕೆಟಿಗರು ವಿಶ್ವಕಪ್ ಗೆದ್ದ ಐತಿಹಾಸಿಕ ಗೆಲುವನ್ನು ನೆನಪಿಸುತ್ತದೆ. ಇದನ್ನೂ ಓದಿ: ದುಬಾರಿ ಕಾರು ಖರೀದಿಸಿದ ಸೋನು ನಿಗಂ
ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ಕಾಣಿಸಿಕೊಂಡಿದ್ದು, ಟ್ರೇಲರ್ನಲ್ಲಿ ಭಾರತೀಯ ಕ್ರಿಕೆಟ್ ತಂಡದವರ ಜರ್ನಿ, ಅವರ ಹೋರಾಟ, ಗೆಲುವುಗಳು ಮತ್ತು ಸೋಲುಗಳನ್ನು ಕಾಣಬಹುದಾಗಿದೆ. ವಿಶೇಷವೆಂದರೆ ಟ್ರೇಲರ್ನಲ್ಲಿ ಕಪಿಲ್ ದೇವ್ ಅವರ ಪತ್ನಿ ಪಾತ್ರದಲ್ಲಿ ರಣ್ವೀರ್ ಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಗಾಂಧಿಯಂತೆ ಚರಕ ತಿರುಗಿಸಿದ ಬಾಲಿವುಡ್ ಸುಲ್ತಾನ್
View this post on Instagram
ಟ್ರೇಲರ್ ಶೇರ್ ಮಾಡಿಕೊಳ್ಳುವುದರ ಜೊತೆಗೆ ರಣ್ವೀರ್ ಸಿಂಗ್ ಅವರು, ಅಸಾಧ್ಯವಾಗದ್ದನ್ನು ಸಾಧ್ಯವಾಗಿಸಿದವರ ನೈಜ ಕಥೆಯ ಟ್ರೇಲರ್ ರಿಲೀಸ್ ಆಗಿದೆ. ಇದೇ ಡಿಸೆಂಬರ್ 24ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. 3ಡಿಯಲ್ಲಿಯು ನೋಡಬಹುದು ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ.