Latest

7ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ 83 ವರ್ಷದ ವಾಚ್‍ಮ್ಯಾನ್‍ನಿಂದ ಅತ್ಯಾಚಾರ

Published

on

Share this

ಹೈದರಾಬಾದ್: 7ನೇ ಕ್ಲಾಸ್ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ 83 ವರ್ಷದ ವೃದ್ಧನನ್ನು ಬುಧವಾರದಂದು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಕಾಪ್ರಾ ಪ್ರದೇಶದಲ್ಲಿ ಎರಡು ತಿಂಗಳ ಹಿಂದಷ್ಟೇ 6 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿದ್ದ ಬಗ್ಗೆ ವರದಿಯಾಗಿತ್ತು. ಇದೀಗ ಇದೇ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಾಲೆಯ ವಾಚ್‍ಮ್ಯಾನ್ ಆಗಿ ಕೆಲಸ ಮಾಡ್ತಿದ್ದ ವೃದ್ಧ ಸತ್ಯನಾರಾಯಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಂಗಳವಾರದಂದು ಬಾಲಕಿ ಪೋಷಕರ ಬಳಿ ಹೇಳಿದ್ದಳು. ಈ ಹಿನ್ನೆಲೆಯಲ್ಲಿ ಪೋಷಕರು ಕುಶೈಗುಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಬಂಧಿತ ಆರೋಪಿ ಹಲವು ತಿಂಗಳಿನಿಂದ ಶಾಲಾ ಆವರಣದಲ್ಲಿ ಸಾಕಷ್ಟು ಹುಡುಗಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ರೈಲ್ವೆ ಸೇವೆಯಿಂದ ನಿವೃತ್ತಿಗೊಂಡಿದ್ದ ವೃದ್ಧನನ್ನು ಕೆಲವು ವರ್ಷಗಳ ಹಿಂದಷ್ಟೇ ವಾಚ್‍ಮ್ಯಾನ್ ಆಗಿ ಕೆಲಸಕ್ಕೆ ತೆಗೆದುಕೊಳ್ಳಲಾಗಿತ್ತು. ಪೊಲೀಸರು ಇತರೆ ದೂರುಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ವಾಚ್‍ಮ್ಯಾನ್ ನಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಇತರೆ ದೂರುಗಳ ತನಿಖೆಯ ಭಾಗವಾಗಿ ಪೊಲೀಸರು 7 ಹುಡುಗಿಯರನ್ನು ವೈದ್ಯಕೀಯ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ವರದಿಯಾಗಿದೆ.

ಸೆಪ್ಟೆಂಬರ್‍ನಲ್ಲಿ ಇದೇ ಕಾಪ್ರಾದಲ್ಲಿ 6 ವರ್ಷದ ಬಾಲಕಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ದೂರಿದ ನಂತರ 60 ವರ್ಷದ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಲಾಗಿತ್ತು.

ಸಿದ್ದಯ್ಯ ಎಂಬಾತ ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಬಾಲಕಿ ತೀವ್ರ ನೋವಿನಿಂದ ಅಳುತ್ತಾ ಮನೆಗೆ ಬಂದು ನಡೆದ ಘಟನೆಯನ್ನು ಪೋಷಕರಿಗೆ ವಿವರಿಸಿದ್ದಳು. ನಂತರ ಸ್ಥಳೀಯರು ವೃದ್ಧನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

Click to comment

Leave a Reply

Your email address will not be published. Required fields are marked *

Advertisement
Bengaluru City24 mins ago

ಹಿಂದಿ ಹೇರಿಕೆ- ಭೂತ ದಹಿಸಿ ವಾಟಳ್ ಪ್ರತಿಭಟನೆ

Bengaluru City26 mins ago

ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

Davanagere26 mins ago

ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ

Bengaluru City34 mins ago

ಆನೇಕಲ್ ರೇವ್ ಪಾರ್ಟಿ ಪ್ರಕರಣ- 35 ಜನರ ಬಂಧನ

Districts49 mins ago

ಅನುಮತಿ ಇಲ್ಲದೇ ಬಿಸಿಯೂಟದ ಕೋಣೆ ನೆಲಸಮ – ಅಧ್ಯಕ್ಷನ ದರ್ಪಕ್ಕೆ ಗ್ರಾಮಸ್ಥರ ಆಕ್ರೋಶ

Bengaluru City1 hour ago

ಮತ್ತೆ ಒಂದಾಗಲಿರುವ ರಾಜಕುಮಾರ ಜೋಡಿ – ಸೆಟ್ಟೇರಲಿದೆ ಪುನೀತ್, ಸಂತೋಷ್ ಕಾಂಬಿನೇಷನ್‍ನ ಹೊಸ ಸಿನಿಮಾ

Districts1 hour ago

ಎಟಿಎಂ ಡಿಟೆಲ್ಸ್ ಪಡೆದು 99 ಸಾವಿರ ವಂಚನೆ

Districts1 hour ago

ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪನವರ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್

Karnataka1 hour ago

ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ

Districts2 hours ago

ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿ