ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆಗೆ ಇನ್ನು 22 ದಿನವಷ್ಟೇ ಬಾಕಿ. ಆಯೋಧ್ಯೆಗೆ ಅಯೋಧ್ಯೆಯೇ ಶ್ರೀರಾಮನನ್ನು (Ayodhya Ram Mandir) ಬರ ಮಾಡಿಕೊಳ್ಳಲು ಸಜ್ಜಾಗುತ್ತಿದೆ. ರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನೆಗೆ ಸಮಯವೂ ನಿಗದಿಯಾಗಿದೆ. 84 ಸೆಕೆಂಡ್ ಅವಧಿಯ ಶುಭ ಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾ (Prana Pratishta) ಕಾರ್ಯ ಸಂಪನ್ನಗೊಳ್ಳಲಿದೆ.
ಜನವರಿ 22ರ ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ನಡುವಿನ 84 ಸೆಕೆಂಡ್‌ಗಳ ಅವಧಿಯನ್ನು ಪ್ರಾಣಪತ್ರಿಷ್ಠಾಪನೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮುಹೂರ್ತಕ್ಕೆ ಸಮಯ ಸೂಚಿಸುವಂತೆ ದೇಶಾದ್ಯಂತ ಇರುವ ವಿದ್ವಾಂಸರು ಹಾಗೂ ಪ್ರಖ್ಯಾತ ಜ್ಯೋತಿಷಿಗಳಲ್ಲಿ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಮನವಿ ಮಾಡಿತ್ತು. ಎಲ್ಲರಿಂದ ಬಂದ ಮಾಹಿತಿಯನ್ನು ಸಮನ್ವಯಗೊಳಿಸಿ ಕೊನೆಗೆ ಮುಹೂರ್ತ ಸಮಯ ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ: ರಾಮ ವಿಗ್ರಹ ಇಂದು ಆಯ್ಕೆ: ಕರ್ನಾಟಕದ ಕಲಾವಿದರ ಕೈಚಳಕ ಗೆಲ್ಲುತ್ತಾ ಮನ..?
Advertisement
Advertisement
ಕಾಶಿಯ ಜ್ಯೋತಿಷಿಯ ಮುಹೂರ್ತ ಆಯ್ಕೆ
ಕಾಶಿಯ ಜ್ಯೋತಿಷಿ ಪಂಡಿತ್ ಗಣೇಶ್ವರ್ ಶಾಸ್ತ್ರಿ ದ್ರಾವಿಡ ಅವರು 84 ಸೆಕೆಂಡ್ ಅವಧಿಯ ಮುಹೂರ್ತವನ್ನು ಸೂಚಿಸಿದ್ದರು. ಜನವರಿ 22ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 08 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ನಡುವಿನ 84 ಸೆಕೆಂಡ್ ಶುಭ ಮುಹೂರ್ತ ಎಂದು ಸೂಚಿಸಿದ್ದರು. ಇದನ್ನೂ ಓದಿ: ಅಯೋಧ್ಯೆಯ ಬಾಲ ರಾಮನ ಮೂರ್ತಿಗೆ ಬಳಸಿದ್ದು ಮೈಸೂರಿನ ಕೃಷ್ಣ ಶಿಲೆ
Advertisement
5 ದಿನಾಂಕಗಳು ಮುಂದಿತ್ತು!
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮನ ಮೂರ್ತಿ ಸ್ಥಾಪನೆಗೆ ದಿನಾಂಕಗಳನ್ನು ಸೂಚಿಸಿತ್ತು. ಇದಕ್ಕೆ ಉತ್ತರವಾಗಿ ದಿನಾಂಕಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಇದರಲ್ಲಿ ಜನವರಿ ತಿಂಗಳ 17ರಿಂದ 25ನೇ ತಾರೀಕಿನ ನಡುವೆ 5 ದಿನಾಂಕಗಳು ಇದ್ದವು. ಕೊನೆಗೆ ಪಂಡಿತ್ ಗಣೇಶ್ವರ್ ಶಾಸ್ತ್ರಿ ದ್ರಾವಿಡ ಅವರು ಜನವರಿ 22ರ ದಿನಾಂಕ ಹಾಗೂ ಪುಣ್ಯ ಮುಹೂರ್ತವನ್ನು ಆಯ್ಕೆ ಮಾಡಿದರು. ಜನವರಿ 22ರ ಮುಹೂರ್ತ ದೇಶಕ್ಕೆ ಸಂಜೀವಿನಿ ಯೋಗ ತರುತ್ತದೆ ಎಂದು ಗಣೇಶ್ವರ ಶಾಸ್ತ್ರಿ ಹೇಳಿದರು.
Advertisement