ಹಾವೆರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದಿದೆ.
ಅಕ್ರಮವಾಗಿ ಹಣವನ್ನು ಸಾಗಾಣಿಕೆ ಮಾಡುತ್ತಿದ್ದ ಖದೀಮರು ಪೊಲೀಸರನ್ನು ಕಂಡು ಕಾರನ್ನು ಸ್ಪೀಡ್ ಆಗಿ ಓಡಿಸಿದ್ದಾರೆ. ಬಳಿಕ ಕಾರ್ ಹಿಂದೆ ಓಡಿ ಹೋಗಿ ಕೆಳಕ್ಕೆ ಬಿದ್ದರೂ ಅವರನ್ನು ಬಿಡದೇ ಪೊಲೀಸರು ಚೇಜ್ ಮಾಡಿ, ಕಾರನ್ನು ನಿಲ್ಲಿಸಿದ್ದಾರೆ.
Advertisement
Advertisement
ಆರೋಪಿಗಳಾದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜಖಾನ್(31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ನನ್ನು ಪೊಲೀರು ಬಂಧಿಸಿದ್ದಾರೆ. ಇವರು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಅಕ್ರಮವಾಗಿ ಹಣ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ
Advertisement
ಪೊಲೀಸರು ಕಾರಿನ ಬ್ಯಾಗಿನಲ್ಲಿ ತುಂಬಿಟ್ಟ 500, 200, 100 ಹಾಗೂ 50 ರೂ. ಮುಖಬೆಲೆಯ ಒಟ್ಟು 85 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
Advertisement
ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳನ್ನು ಹಿಡಿಯಲು ಹಾನಗಲ್ ಸಿಪಿಐ ಶಿವಶಂಕರ್ ಗಣಾಚಾರಿ ಹಾಗೂ ಪಿಎಸ್‌ಐ ಶ್ರೀಶೈಲ ಪಟ್ಟಣ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಎಸ್‌ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆಯರು- ಶ್ರೀಗಳಿಗೆ ನೋಟಿಸ್ ಸಾಧ್ಯತೆ