
ಬೆಂಗಳೂರು: ಕೊರೊನಾ 4ನೇ ಅಲೆ ಭೀತಿಯ ಬೆನ್ನಲ್ಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಒಟ್ಟು 85 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿನ್ನೆಗಿಂತ 21 ಪ್ರಕರಣಗಳು ಹೆಚ್ಚಾಗಿದೆ. ಆದರೂ ಕಳೆದ ಹಲವು ದಿನಗಳಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.
ಬೆಂಗಳೂರು ನಗರದಲ್ಲಿ ಇಂದು 82 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿಧಾನವಾಗಿ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ರಾಜ್ಯದ ಪಾಸಿಟಿವಿಟಿ ರೇಟ್ 1.18% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,686 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮಂದಿ ಮೃತಪಟ್ಟಿದ್ದಾರೆ. 70 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?
ಈವರೆಗೆ ರಾಜ್ಯದಲ್ಲಿ ಒಟ್ಟು 39,47,083 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,05,298 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 57,468 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 7,171 ಸ್ಯಾಂಪಲ್ (ಆರ್‌ಟಿ ಪಿಸಿಆರ್ 4,642 + 2529 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಕೋವಿಡ್-19 ನಾಲ್ಕನೇ ಅಲೆ ಪ್ರಾಬಲ್ಯ ತುಂಬಾ ಕಡಿಮೆ: ವೈರಾಣು ತಜ್ಞ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 82, ತುಮಕೂರು 1 ಹಾಗೂ ವಿಜಯಪುರದಲ್ಲಿ 2 ಪಾಸಿಟಿವ್ ಕೇಸ್ ದಾಖಲಾಗಿದೆ. ಉಳಿದಂತೆ 27 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.