ಹಾವೇರಿ: ಜನವರಿ 6, 7 ಹಾಗೂ 8 ರಂದು ಹಾವೇರಿಯಲ್ಲಿ (Haveri) ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharath Kannada Sahitya Sammelana) ವಿವಿಧ ಕೆಲಸ ಕಾರ್ಯಗಳಿಗೆ ರಚಿಸಲಾದ 16 ಸಮಿತಿಗಳನ್ನು (Committee) ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಭಾನುವಾರ ಪ್ರಕಟಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಜರುಗಿದ ಸ್ವಾಗತ ಸಮಿತಿಯ ಸಭೆಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ಸಮಿತಿಗಳ ಗೌರವಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳ ಹೆಸರನ್ನು ಪ್ರಕಟಿಸಿದರು.
Advertisement
Advertisement
ಸಮನ್ವಯ ಸಮಿತಿಯ ಗೌರವಾಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ವಿಧಾನಸಭಾ ಮಾಜಿ ಸಭಾಪತಿ ಕೆ.ಬಿ ಕೋಳಿವಾಡ, ಅಧ್ಯಕ್ಷರಾಗಿ ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್, ಉಪಾಧ್ಯಕ್ಷರಾಗಿ ಮಾಜಿ ಶಾಸಕ ಬಿ.ಎಸ್ ಬನ್ನಿಕೋಡ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ.
Advertisement
Advertisement
ಸಮ್ಮೇಳನದ ಸಿದ್ಧತೆ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿಗೆ ಗೌರವಾಧ್ಯಕ್ಷರಾಗಿ ಸಂಸದ ಶಿವಕುಮಾರ್ ಉದಾಸಿ, ಅಧ್ಯಕ್ಷರಾಗಿ ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ಸುರೇಶ್ ಗೌಡ ಬಿ ಪಾಟೀಲ್, ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನೂ ಓದಿ: ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ: ಬಿಬಿಎಂಪಿ ಅಧಿಕಾರಿ ಮನವಿ
ವೇದಿಕೆ ನಿರ್ಮಾಣ ಸಮಿತಿ ಗೌರವಾಧ್ಯಕ್ಷರಾಗಿ ಸಚಿವ ಸುನೀಲ್ ಕುಮಾರ್, ಅಧ್ಯಕ್ಷರಾಗಿ ಶಾಸಕ ಹಾಗೂ ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರೂ ಓಲೇಕಾರ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನೂ ಓದಿ: ಸಿದ್ದು ಪ್ರವಾಸದ ಬಳಿಕ ಕೋಲಾರ ಕ್ಷೇತ್ರದಲ್ಲಿ ಚುರುಕಾದ ಬಿಜೆಪಿ