ಬೆಂಗಳೂರು: ಮುಂದಿನ ವರ್ಷದ ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahithya Sammelana) ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್(Sunil Kumar) ಅವರು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಜೊತೆ ಚರ್ಚೆ ನಡೆಸಿ ದಿನಾಂಕವನ್ನುಅಂತಿಮಗೊಳಿಸಿದ್ದಾರೆ. ಇದನ್ನೂ ಓದಿ: ಮೋದಿ ವಿಶ್ವಗುರು ಅಲ್ಲ ಪುಕ್ಕಲು ಗುರು: ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಇಂದು ಸುನಿಲ್ ಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಬರುವ ನಿರೀಕ್ಷೆಯಿದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ, 30 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.