ಕಲಬುರಗಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಏಲಕ್ಕಿ ನಗರ ಹಾವೇರಿಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಅವರು ಗುರುವಾರ ಕಲಬುರಗಿಯಲ್ಲಿ ಅಧಿಕೃತ ಘೋಷಣೆ ಮಾಡಿದರು.
ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Advertisement
Advertisement
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಾ. ಮನು ಬಳಿಗಾರ ಅವರು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಮುಂದಿನ ಸಮ್ಮೇಳನ ಆಯೋಜಿಸುವ ಕುರಿತು ಚರ್ಚೆ ನಡೆಯಿತು. ಕೊನೆಗೆ ಎಲ್ಲಾ ಸದಸ್ಯರು ಸರ್ವಾನುಮತದಿಂದ ಹಾವೇರಿ ನಗರದಲ್ಲಿ ನಡೆಸಲು ತೀರ್ಮಾನಿಸಿದರು ಎಂದರು.
Advertisement
39 ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಸಭೆಯಲ್ಲಿ 21 ಮಂದಿ ಹಾವೇರಿ ಜಿಲ್ಲೆಯನ್ನು ಬೆಂಬಲಿಸಿದರೆ, 18 ಮಂದಿ ಚಿಕ್ಕಬಳ್ಳಾಪುರಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದರು. ಅಲ್ಲದೆ ಮೂಡಬಿದರೆಯಲ್ಲೂ ಸಾಹಿತ್ಯ ಸಮ್ಮೇನ ನಡೆಸುವ ಬಗ್ಗೆ ಮಾತುಕತೆ ನಡೆಸಲಾಯಿತು.