ನವದೆಹಲಿ: ಕಳ್ಳತನ ಮಾಡಲು ಬಂದು 87 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ.
ವೃದ್ಧೆ ತನ್ನ 65 ವರ್ಷದ ಮಗಳೊಂದಿಗೆ ವಾಸಿಸುತ್ತಾಳೆ. ಭಾನುವಾರ ಮಧ್ಯಾಹ್ನ ಮಗಳು ವಾಕಿಂಗ್ ಹೋಗಿದ್ದಳು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿದ್ದಾನೆ. ಆತ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ, ಮಗಳು ಮನೆಗೆ ಬಂದಾಗ ವೃದ್ಧೆ ಬಟ್ಟೆಯ ಹರಿದಿತ್ತು, ಮತ್ತು ರಕ್ತಸ್ರಾವವಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಬುಧವಾರದಿಂದ ಪಿಯು, ಪದವಿ ಕಾಲೇಜು ಆರಂಭ
ರಾಷ್ಟ್ರ ರಾಜಧಾನಿ ದೆಹಲಿಯ ತಿಲಕ್ ನಗರದಲ್ಲಿ 87 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ. ತಮ್ಮ ಮನೆಯಲ್ಲಿ ಮೊಬೈಲ್ ಕಳುವಾಗಿದೆ ಎಂದು ತಿಲಕ್ ನಗರದ ಮನೆಯೊಂದರ ಮೊಬೈಲ್ ಫೋನ್ ಕಳ್ಳತನದ ಬಗ್ಗೆ ವೃದ್ಧೆಯ ಮಗಳು ಫೆಬ್ರವರಿ 13ರಂದು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆ ಕಳ್ಳತನ ನಡೆದ ಮನೆಯಲ್ಲಿದ್ದ ತನ್ನ 87 ವರ್ಷದ ಅಮ್ಮನ ಮೇಲೂ ಅತ್ಯಾಚಾರ ಎಸಗಲಾಗಿದೆ ಎಂದು ಆ ಮಹಿಳೆ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್ ಶಾಸಕಿ
ಆರೋಪಿಗಳ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ 380 ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ವೃದ್ಧೆಯ ಮೇಲೆ ಅತ್ಯಾಚಾರವೆಸಗಿ, ಮನೆಯಲ್ಲಿ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.