ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಂದು ಇಳಿಕೆ ಕಂಡಿದೆ. ಕೆಲದಿನಗಳಿಂದ ಸಾವಿರಕ್ಕೂ ಅಧಿಕ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆ ಇಂದು 886ಕ್ಕೆ ಇಳಿಕೆ ಕಂಡಿದೆ.
Advertisement
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,764ಕ್ಕೆ ಇಳಿಕೆ ಕಂಡಿದೆ. ಬೆಂಗಳೂರು ನಗರದಲ್ಲೂ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡಿದ್ದು, ಇಂದು 608 ಪ್ರಕರಣ ದಾಖಲಾಗಿದೆ. ಜಿಲ್ಲೆಗಳ ಪೈಕಿ ಬಳ್ಳಾರಿಯಲ್ಲಿ ದಾಖಲಾದ 36 ಕೇಸ್ ಹೆಚ್ಚಿನ ಕೇಸ್ ಆಗಿದೆ. ಇಂದು ಬೆಂಗಳೂರು, ದಕ್ಷಿಣಕನ್ನಡ ಮತ್ತು ಹಾವೇರಿಯಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಈವರೆಗೆ ಒಟ್ಟು 40,155 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,999 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ. 4.06ಕ್ಕೆ ಇಳಿಕೆ ಕಂಡಿದೆ. ಇದನ್ನೂ ಓದಿ: ದೇಶದಲ್ಲಿ ಕೊರೊನಾ ಏರಿಕೆ – ವಿಮಾನ ಪ್ರಯಾಣದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ: ಡಿಜಿಸಿಎ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 40,34,496 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,85,535 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 2,12,268 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,792 ಸ್ಯಾಂಪಲ್ (ಆರ್‌ಟಿಪಿಸಿಆರ್ 13,106 + 8,686 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹುತಾತ್ಮ ಯೋಧರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಲೆಫ್ಟಿನೆಂಟ್ ಗವರ್ನರ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 7, ಬಳ್ಳಾರಿ 36, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 608, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 12, ಚಿತ್ರದುರ್ಗ 4, ದಕ್ಷಿಣ ಕನ್ನಡ 9, ದಾವಣಗೆರೆ 7, ಧಾರವಾಡ 23, ಗದಗ 0, ಹಾಸನ 8, ಹಾವೇರಿ 1, ಕಲಬುರಗಿ 10, ಕೊಡಗು 18, ಕೋಲಾರ 12, ಕೊಪ್ಪಳ 1, ಮಂಡ್ಯ 8, ಮೈಸೂರು 17, ರಾಯಚೂರು 9, ರಾಮನಗರ 6, ಶಿವಮೊಗ್ಗ 13, ತುಮಕೂರು 24, ಉಡುಪಿ 6, ಉತ್ತರ ಕನ್ನಡ 13, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 2 ಪಾಸಿಟಿವ್ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]