ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಳಿತ ಕಾಣುತ್ತಿದ್ದು, ಇಂದು ಒಟ್ಟು 891 ಕೊರೊನಾ ಪ್ರಕರಣ ವರದಿಯಾಗಿದೆ ಹಾಗೂ 1 ಮರಣ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಇಂದು 832 ಕೇಸ್‌ಗಳು ದಾಖಲಾಗಿದ್ದು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,419ಕ್ಕೆ ತಲುಪಿದೆ. ರಾಜ್ಯದಲ್ಲಿ ದಾಖಲಾದ 1 ಮರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ. ಬೆಂಗಳೂರಿನ ಬಳಿಕ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ.4.51 ಕ್ಕೆ ತಲುಪಿದೆ.
ಇಂದು 1,189 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,80,585 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,34,041 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 40,083 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಉಗ್ರರಿಂದ ಗುಂಡಿನ ದಾಳಿ – ಓರ್ವ ಪೊಲೀಸ್ ಹುತಾತ್ಮ, ಇಬ್ಬರಿಗೆ ಗಾಯ
ರಾಜ್ಯದಲ್ಲಿ ಇಂದು ಒಟ್ಟು 31,342 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 19,738 ಸ್ಯಾಂಪಲ್ (ಆರ್‌ಟಿ-ಪಿಸಿಆರ್ 12,107 + 7,631 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಳ್ಳಾರಿ 3, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 832, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ದಕ್ಷಿಣ ಕನ್ನಡ 7, ಧಾರವಾಡ 8, ಹಾಸನ 1, ಕೋಲಾರ 2, ಮಂಡ್ಯ 2, ಮೈಸೂರು 9, ರಾಯಚೂರು 1, ಶಿವಮೊಗ್ಗ 6, ತುಮಕೂರು 5, ಉಡುಪಿ 3, ಉತ್ತರ ಕನ್ನಡ 2, ವಿಜಯಪುರ 1 ಹಾಗೂ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ – ಚಾಮರಾಜಪೇಟೆ ಬಂದ್ ಯಶಸ್ವಿ