ಬೆಂಗಳೂರು: ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಿದ್ದ 50 ಸಾವಿರ ರೂ. ಪರಿಹಾರ ಧನವನ್ನು ಕರ್ನಾಟಕದ 893 ಕುಟುಂಬಗಳು ತಿರಸ್ಕರಿಸಿವೆ.
ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಕೊರೊನಾ ಪರಿಹಾರ ಧನವು ಕೇಂದ್ರ ಸರ್ಕಾರದಿಂದ ಘೋಷಣೆಯಾಗಿತ್ತು. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಪರಿಹಾರ ಧನವನ್ನು ನೀಡಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟು 1.5 ಲಕ್ಷ ರೂ. ಪರಿಹಾರ ಧನವನ್ನು ಘೋಷಣೆ ಮಾಡಲಾಗಿತ್ತು. ಇದನ್ನೂ ಓದಿ: ಧೋವಲ್ ಸಂಧಾನ – ಗಡಿಯಿಂದ ಪೂರ್ಣ ಸೇನೆ ವಾಪಸ್‌ಗೆ ಚೀನಾ ಒಪ್ಪಿಗೆ
Advertisement
Advertisement
ಸರ್ಕಾರ ಪರಿಹಾರ ಘೋಷಣೆ ಮಾಡಿದರೂ ಕುಟುಂಬಗಳ ಅವರ ಹೆಸರಿನಲ್ಲಿ ಹಣವನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿವೆ. ನಮಗೆ ಮೃತಪಟ್ಟವರ ಹೆಸರಿನಲ್ಲಿ ಸರ್ಕಾರದ ಹಣ ಬೇಡ. ಅದನ್ನು ಬಡವರಿಗೆ ನೀಡಿ ಎಂದು ಹೇಳಿವೆ. ಇದನ್ನೂ ಓದಿ: Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು
Advertisement
ರಾಜಧಾನಿ ಬೆಂಗಳೂರು ಒಂದರಲ್ಲೇ 521 ಕುಟುಂಬಗಳು ಕೋವಿಡ್ ಪರಿಹಾರ ಧನವನ್ನು ನಿರಾಕರಿಸಿವೆ. ಕೊರೊನಾದಿಂದ ರಾಜಧಾನಿಯಲ್ಲಿ ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಸರ್ಕಾರದ ಅನುದಾನಗಳು ಸೂಕ್ತ ಸಮಯಕ್ಕೆ ಕೈ ಸೇರುವುದೇ ಕಷ್ಟವಾಗಿರುವ ಸಮಯದಲ್ಲಿ ಕುಟುಂಬಗಳು ಪರಿಹಾರ ಬೇಡ ಎಂದು ಹೇಳಿವೆ.
Advertisement
ಯಾವ ಜಿಲ್ಲೆಯಲ್ಲಿ ಎಷ್ಟು ಕುಟುಂಬ ನಿರಾಕರಣೆ?
ಬಿಬಿಎಮ್‍ಪಿ ವ್ಯಾಪ್ತಿಯಲ್ಲಿ 481, ಬೆಂಗಳೂರು ನಗರ 40, ಕೋಲಾರ 55, ಮೈಸೂರು 29, ಹಾಸನ 26, ದಕ್ಷಿಣ ಕನ್ನಡ 24, ಕಲಬುರಗಿ 23, ಕೊಪ್ಪಳ 17 ಮಂಡ್ಯ 17 ಶಿವಮೊಗ್ಗ 16, ಉತ್ತರಕನ್ನಡ 14, ಬಳ್ಳಾರಿ 13, ಚಿಕ್ಕಮಗಳೂರು 12, ಚಾಮರಾಜನಗರ 11, ಬಾಗಲಕೋಟೆ 9, ಉಡುಪಿ 9, ಬೆಳಗಾವಿ 9, ಚಿಕ್ಕಬಳ್ಳಾಪುರ ಮತ್ತು ವಿಜಯಪುರ ತಲಾ 8, ಬೀದರ ಮತ್ತು ತುಮಕೂರು ತಲಾ 7, ಹಾವೇರಿ 6, ಬೆಂಗಳೂರು ಗ್ರಾಮಾಂತರ ಗದಗ ಹಾಗೂ ರಾಯಚೂರು ತಲಾ 5, ಚಿತ್ರದುರ್ಗ 3, ದಾವಣಗೆರೆ 2, ಯಾದಗಿರಿ 1