ಲಕ್ನೋ: ಭಾರೀ ಮಳೆಯಿಂದಾಗಿ (Rain) ಗೋಡೆ ಕುಸಿದು (Wall Collapse) 9 ಮಂದಿ ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow) ನಡೆದಿದೆ. ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಮತ್ತು ಗಾಯಾಳುಗಳ ಚಿಕಿತ್ಸೆಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಗಂಟೆಗೆ 130 ಕಿ.ಮೀ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಕಾರು – ಮಹಿಳಾ ಟೆಕ್ಕಿಗಳಿಬ್ಬರ ದುರ್ಮರಣ
- Advertisement
ಕೆಲವು ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್‌ಕ್ಲೇವ್‌ನ ಹೊರಗೆ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ರಾತ್ರಿಯ ಭಾರೀ ಮಳೆಯಿಂದಾಗಿ, ಆರ್ಮಿ ಎನ್‌ಕ್ಲೇವ್‌ನ ಗಡಿ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.
- Advertisement
ರಾತ್ರಿಯ ಎಡೆಬಿಡದ ಮಳೆಯ ನಂತರ ಇಂದು ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಜೈಲುವಾಸ ಮುಗಿಸಿ ಹೊರ ಬಂದವರಿಗೆ ಗುಡ್ ನ್ಯೂಸ್!
ಲಕ್ನೋದಲ್ಲಿ ಇಡೀ ತಿಂಗಳಲ್ಲಿ ಬೀಳುವ ಪ್ರಮಾಣದ ಮಳೆ ಒಂದೇ ದಿನದಲ್ಲಿ ಸುರಿದಿದೆ. ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 155.2 ಮಿ.ಮೀ ಮಳೆ ದಾಖಲಾಗಿದೆ. ಇಡೀ ಸೆಪ್ಟೆಂಬರ್ ತಿಂಗಳಿಗೆ ಲಕ್ನೋ ಸಾಮಾನ್ಯವಾಗಿ ಪಡೆಯುವ ಸರಾಸರಿ 197 ಮಿ.ಮೀ. ಅಸಾಧಾರಣ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಜಲಾವೃತವಾಗಿದೆ.