ಹಾಸನ: ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, ಹನ್ನೆರಡು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ನಡೆದಿದೆ.
ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು. ಊರಿಗೆ ತಲುಪಲು ಎರಡರಿಂದ ಮೂರು ನಿಮಿಷವಿರುವಾಗಲೇ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್
Advertisement
Advertisement
ಅರಸೀಕೆರೆ ತಾಲ್ಲೂಕಿನ, ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟೆಂಪೋ ಟ್ರಾವೆಲರ್ ವಾಹನದಲ್ಲಿ ನಿನ್ನೆ ಧರ್ಮಸ್ಥಳಕ್ಕೆ ತೆರಳಿದ್ದರು. ಮಕ್ಕಳು ಸೇರಿದಂತೆ ಪುರುಷರು ಮುಡಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಎಲ್ಲರೂ ಹಳ್ಳಿಕೆರೆ ಗ್ರಾಮಕ್ಕೆ ತೆರಳುತ್ತಿದ್ದರು. ಸ್ವಗ್ರಾಮ ತಲುಪಲು ಎರಡು ಕಿಲೋಮೀಟರ್ ಇದ್ದು, ಐದು ನಿಮಿಷದಲ್ಲಿ ಮನೆ ಸೇರಿಕೊಳ್ಳತ್ತಿದ್ದರು.
Advertisement
ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಕಾಮಗಾರಿ ನಡೆಯುತ್ತಿದ್ದು, ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಯಮಸ್ವರೂಪಿ ಹಾಲಿನ ಲಾರಿ ಚಾಲಕನಿಗೆ ತಿರುವು ಗೊತ್ತಾಗದೆ ಎರಡು ವಾಹನಗಳು ಬರುತ್ತಿದ್ದ ಕಡೆಗೆ ಏಕಮುಖವಾಗಿ ಬಂದಿದೆ. ಈ ವೇಳೆ ವೇಗವಾಗಿದ್ದ ಟಿಟಿ ವಾಹನ ಹಾಲಿನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಇದೇ ವಾಹನದ ಹಿಂಬದಿಯಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: RSS ಬಗ್ಗೆ ಹೊಟ್ಟೆ ಕಿಚ್ಚಿದ್ದವರಿಗೆ ಮದ್ದಿಲ್ಲ: ಪ್ರಮೋದ್ ಮಧ್ವರಾಜ್
Advertisement
ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ದ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಸೇರಿ ಒಂಭತ್ತು ಮಂದಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, 12 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಹತ್ತು ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ಟಿಟಿ ವಾಹನವನ್ನು ತೆರುವುಗೊಳಿಸಲಾಯಿತು.
ಒಂದೇ ಗ್ರಾಮದ ನಾಲ್ವರು ಮಕ್ಕಳು, ಮೂವರು ಮಹಿಳೆಯರು, ಓರ್ವ ಪುರುಷ ಸಾವನ್ನಪ್ಪಿದ್ದು, ಮೃತದೇಹಗಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.