-ಎ.ಸಿ ಬ್ಲಾಸ್ಟ್ ಶಂಕೆ
ಕೋಲ್ಕತ್ತಾ: ಹೋಟೆಲ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ (Hotel Fire) ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ (Kolkata) ಬುಧವಾರ ಮುಂಜಾನೆ ಸಂಭವಿಸಿದೆ.
ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ (Free School Street) ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಹೋಟೆಲ್‌ನೊಳಗಿದ್ದ ಹಲವು ಅತಿಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಎ.ಸಿ ಸ್ಫೋಟಗೊಂಡ (AC Blast) ಪರಿಣಾಮ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಇದನ್ನೂ ಓದಿ: Hocky World Cup 2026: ಇಂದು ಭಾರತ-ಪಾಕ್ ಹೈವೋಲ್ಟೇಜ್ ಕದನ; ಟೀಂ ಇಂಡಿಯಾಗೆ ಡು ಆರ್ ಡೈ ಪಂದ್ಯ
ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಈ ಹೋಟೆಲ್ ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಹೀಗಾಗಿ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿ ಕಾಣಿಸಿಕೊಂಡ ಕುರಿತು ಮಾಹಿತಿ ಲಭ್ಯವಾದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಜೊತೆಗೆ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದನ್ನೂ ಓದಿ: ಕ್ಷಿಪಣಿ ದಾಳಿ; ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ಸ್ಥಗಿತಗೊಳಿಸಿದ ಯುಎಇ
ಹೋಟೆಲ್ ಕಟ್ಟಡದೊಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: NTAಗೆ ಮೇಜರ್ ಸರ್ಜರಿ- 600 ಅಧಿಕಾರಿಗಳಿಗೆ ಗೇಟ್‌ಪಾಸ್
ಘಟನೆಯಲ್ಲಿ ಮೃತಪಟ್ಟವರ ಗುರುತು ಹಾಗೂ ಅಗ್ನಿ ಅವಘಡದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೆಂಕಿಯಲ್ಲಿ ಸಾವನ್ನಪ್ಪಿದ ಎಲ್ಲಾ ಒಂಬತ್ತು ಜನರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದರು ಎಂದು ವರದಿಯಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯುವಿಗೆ ನಿವೃತ್ತಿ – ಈ ಬಾರಿ ದಸರಾ ಗಜಪಡೆಗೆ ಹೊಸ ಕ್ಯಾಪ್ಟನ್

