ಕೀವ್: ಉಕ್ರೇನ್‌ನ ವಿನ್ನಿಟ್ಸಿಯಾ ವಿಮಾನ ನಿಲ್ದಾಣದ ಮೇಲೆ ರಷ್ಯಾ ನಡೆಸಿದ ವೈಮಾನಿಕ ಬಾಂಬ್ ದಾಳಿಗೆ 9 ಮಂದಿ ಬಲಿಯಾಗಿದ್ದಾರೆ.
ದಾಳಿಯಲ್ಲಿ ಅನೇಕರು ಗಂಭೀರ ಗಾಯಗೊಂಡಿದ್ದಾರೆ. ಉಕ್ರೇನಿಯನ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ 15 ಮಂದಿಯನ್ನು ರಕ್ಷಿಸಿದ್ದಾರೆ. ಮೃತಪಟ್ಟವರಲ್ಲಿ ಐವರು ನಾಯಕರು ಹಾಗೂ ನಾಲ್ವರು ಯೋಧರಾಗಿದ್ದಾರೆ. ಇದನ್ನೂ ಓದಿ: ಜಾಗತಿಕ ರಾಷ್ಟ್ರಗಳ ನಿರ್ಬಂಧಕ್ಕೆ ರಷ್ಯಾ ಸೆಡ್ಡು- ಇಂಟರ್‌ನೆಟ್ ಸ್ವಾವಲಂಬನೆಯತ್ತ ಹೆಜ್ಜೆ
ದಾಳಿ ಕುರಿತು ಮಾತನಾಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ, ಉಕ್ರೇನ್ ಮೇಲೆ ಹಾರಾಟ ನಿಷೇಧ ವಲಯವನ್ನು ರೂಪಿಸಿ ಎಂದು ನಾನು ಐರೋಪ್ಯ ರಾಷ್ಟ್ರಗಳಲ್ಲಿ ಮತ್ತೆ ಕೇಳುತ್ತಿದ್ದೇನೆ. ರಷ್ಯಾದ ಕ್ಷಿಪಣಿಗಳ ದಾಳಿ ಮಾಡದಂತೆ ಹಾರಾಟ ನಿಷೇಧ ವಲಯ ರೂಪಿಸಿ ಎಂದು ಒತ್ತಾಯಿಸಿದ್ದಾರೆ.
ಐರೋಪ್ಯ ಒಕ್ಕೂಟದ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಅವರು, ಉಕ್ರೇನ್ ಮೇಲೆ ಹಾರಾಟ ನಿಷೇಧ ವಲಯ ರೂಪಿಸಿದರೆ ವಿಶ್ವಯುದ್ಧವನ್ನು ಹುಟ್ಟುಹಾಕಿದಂತಾಗುತ್ತದೆ ಎಂದು ಉಕ್ರೇನ್ ಮನವಿಯನ್ನು ತಿರಸ್ಕರಿಸಿತ್ತು. ಇದಕ್ಕೆ ಉಕ್ರೇನ್ ಅಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ