ಕೊಲಂಬೊ: ಶ್ರೀಲಂಕಾ (Sri Lanka Navy) ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ.
ಮೀನುಗಾರರು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (IMBL) ದಾಟಿ ತಲೈಮನ್ನಾರ್ ಉತ್ತರ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು. ಈ ವೇಳೆ ಬುಧವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಅವರನ್ನು ಬಂಧಿಸಲಾಗಿದೆ ಶ್ರೀಲಂಕಾ ನೌಕಾಪಡೆ ಮಾಹಿತಿ ನೀಡಿದೆ.
ಕಾರ್ಯಾಚರಣೆ ವೇಳೆ 50ಕ್ಕೂ ಹೆಚ್ಚು ಭಾರತೀಯ ಟ್ರಾಲರ್‌ಗಳು ಇರಾನತಿವು ದಕ್ಷಿಣ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು ನೌಕಾಪಡೆ ತಿಳಿಸಿದೆ.ಇದನ್ನೂ ಓದಿ: ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ
ಬಂಧಿತ 9 ಮೀನುಗಾರರು ಹಾಗೂ ವಶಪಡಿಸಿಕೊಂಡ ಟ್ರಾಲರ್‌ನ್ನು ಮನ್ನಾರ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮುಂದಿನ ಕಾನೂನು ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ.
ಈ ವರ್ಷ ಈಗಾಗಲೇ ಶ್ರೀಲಂಕಾ ನೌಕಾಪಡೆ 128 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, 18 ಟ್ರಾಲರ್‌ಗಳನ್ನು ವಶಪಡಿಸಿಕೊಂಡಿದೆ. ಈ ಬೆಳವಣಿಗೆ ಭಾರತ-ಶ್ರೀಲಂಕಾ ಮೀನುಗಾರರ ವಿವಾದ ಮತ್ತೆ ಚರ್ಚೆಗೆ ಕಾರಣವಾಗಿದೆ.
ತಮಿಳುನಾಡು ಮತ್ತು ಶ್ರೀಲಂಕಾ ನಡುವಿನ ಪಾಕ್ ಜಲಸಂಧಿ ಮೀನುಗಾರಿಕೆಗೆ ಪ್ರಮುಖ ಪ್ರದೇಶವಾಗಿದ್ದು, ಗಡಿ ದಾಟಿದ ಆರೋಪದಲ್ಲಿ ಎರಡೂ ದೇಶಗಳ ಮೀನುಗಾರರು ಆಗಾಗ್ಗೆ ಬಂಧನಕ್ಕೊಳಗಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದನ್ನೂ ಓದಿ: ಫಾಸ್ಟ್-ಟ್ರ್ಯಾಕ್ ಕೋರ್ಟ್ ಸಾಲದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು: ಪ್ರಧಾನಿ ಮೋದಿಗೆ CJP ತಿರುಗೇಟು
