ಮಾಲ್ಡೀವ್ಸ್‌ನಲ್ಲಿ ಭೀಕರ ಅಗ್ನಿ ದುರಂತ – 9 ಮಂದಿ ಭಾರತೀಯರು ಸಾವು

Public TV
2 Min Read
Maldives

ಮಾಲೆ: ಬೇರೆ ಬೇರೆ ದೇಶಗಳಿಂದ ಕೆಲಸಕ್ಕಾಗಿ ಬಂದು ಮಾಲ್ಡೀವ್ಸ್ (Maldives) ರಾಜಧಾನಿ ಮಾಲೆಯಲ್ಲಿ (Male) ವಾಸವಾಗಿದ್ದವರ ಇಕ್ಕಟ್ಟಾದ ವಸತಿಗೃಹಗಳಲ್ಲಿ ಅಗ್ನಿ ಅವಘಡ ಕಾಣಿಸಿಕೊಂಡಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Maldives 1

ನೆಲ ಮಹಡಿಯಲ್ಲಿ ವಾಹನಗಳನ್ನು ರಿಪೇರಿ ಮಾಡುವ ಗ್ಯಾರೇಜ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳ ಕಾಲ ಬೇಕಾಯಿತು. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದೀಗ ಕಟ್ಟಡದ ಮೇಲಿನ ಮಹಡಿಯಿಂದ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತರಲ್ಲಿ ಒಂಬತ್ತು ಮಂದಿ ಭಾರತ ಮೂಲದವಾರಗಿದ್ದು, ಓರ್ವ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- ವಿವಾದಿತ ವಸ್ತುವಿನ ರಕ್ಷಣೆ ವಿಸ್ತರಣೆಗೆ ಮನವಿ

ಘಟನೆ ಕುರಿತಂತೆ ಮಾಲ್ಡೀವ್ಸ್‍ನಲ್ಲಿರುವ ಭಾರತದ ಹೈಕಮಿಷನ್ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದೆ. ಮಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಮ್ಮ ಭಾರತೀಯ ಮೂಲದ ಪ್ರಜೆಗಳು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ. ನಾವು ಮಾಲ್ಡೀವ್ಸ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೈಕಮಿಷನ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

ಬೇರೆ ಬೇರೆ ದೇಶದಿಂದ ಇಲ್ಲಿಗೆ ಬಂದಿದ್ದ ಮತ್ತು ಮಾಲ್ಡೀವ್ಸ್‍ನಲ್ಲಿ ವಾಸವಾಗಿದ್ದ ಉದ್ಯೋಗಿಗಳು ಈ ಕಟ್ಟದಲ್ಲಿ ಅರ್ಧದಷ್ಟು ಜನ ಇದ್ದರು ಮತ್ತು ಹೆಚ್ಚಾಗಿ ಬಾಂಗ್ಲಾದೇಶ, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಬಂದವರು ಎಂದು ಹೇಳಲಾಗುತ್ತದೆ. ಯಾವುದೇ ಸಹಾಯಕ್ಕಾಗಿ, HCI ಅನ್ನು ಈ ಸಂಖ್ಯೆಗಳಲ್ಲಿ ಸಂಪರ್ಕಿಸಿ ಎಂದು +9607361452 ; +9607790701 ಮಾಲ್ಡೀವ್ಸ್ ಟ್ವೀಟ್ ಮಾಡಿದೆ.

ದ್ವೀಪಗಳ ರಾಜಧಾನಿ, ರಜೆಯನ್ನು ಕಳೆಯಲು ಮತ್ತು ಉನ್ನತ ಮಾರುಕಟ್ಟೆಯನ್ನು ಹೊಂದಿರುವ ಮಾಲ್ಡೀವ್ಸ್ ಪ್ರಸಿದ್ಧ ತಾಣವಾಗಿದ್ದು, ಇದು ವಿಶ್ವದ ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾಗಿದೆ.

Live Tv
[brid partner=56869869 player=32851 video=960834 autoplay=true]

Share This Article