– ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ದೇವೇಂದ್ರ ಫಡ್ನವಿಸ್
ಮುಂಬೈ: ಟೆಂಪೊವೊಂದು (Tempo) ಮಿನಿವ್ಯಾನ್‌ಗೆ (Minivan) ಡಿಕ್ಕಿ ಹೊಡೆದ ಪರಿಣಾಮ ಮಿನಿವ್ಯಾನ್ ರಸ್ತೆಬದಿ ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ ಹೊಡೆದು 9 ಮಂದಿ ಕಾರ್ಮಿಕರು ಮೃತಪಟ್ಟ ಘಟನೆ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
Advertisement
ಬೆಳಗ್ಗೆ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.ಮಿನಿವ್ಯಾನ್ ನಾರಾಯಣಗಾಂವ್ (Narayangaon) ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಟೆಂಪೊ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮಿನಿವ್ಯಾನ್ ರಸ್ತೆ ಬದಿಯಲ್ಲಿದ್ದ ಖಾಲಿ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಿನಿವ್ಯಾನ್‌ನಲ್ಲಿದ್ದ 9 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ. ಇದನ್ನೂ ಓದಿ: 189 ಕ್ಷೇತ್ರಗಳ ಶಾಸಕರಿಗೆ ತಲಾ 10 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ
Advertisement
Advertisement
ಇನ್ನು ಘಟನೆಯ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಪುಣೆ-ನಾಸಿಕ್ ಹೆದ್ದಾರಿಯ ನಾರಾಯಣಗಾಂವ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿದ್ದು ದುರಾದೃಷ್ಟಕರ. ಅವರಿಗೆ ನನ್ನ ಸಂತಾಪ ಸಲ್ಲಿಸುತ್ತೇನೆ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ. ಅಲ್ಲದೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Chhattisgarh| ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟ – ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
Advertisement