ಇಸ್ಲಾಮಾಬಾದ್: ಭಾರತದ ರಾಜಧಾನಿ ದೆಹಲಿ (Delhi Earthquake) ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಂಗಳವಾರ ಭೂಮಿ ಕಂಪಿಸಿ ಜನತೆಯಲ್ಲಿ ಭೀತಿ ಹುಟ್ಟಿಸಿತು. ಇದರ ಬೆನ್ನಲ್ಲೇ ಪಾಕಿಸ್ತಾನದಲ್ಲೂ (Pakistan Earthquake) ಪ್ರಬಲ ಭೂಕಂಪವಾಗಿ 9 ಮಂದಿ ಸಾವಿಗೀಡಾಗಿದ್ದಾರೆ.
ಪಾಕಿಸ್ತಾನದಲ್ಲಿ 6.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ (Afghanistan) ಹಿಂದೂ ಕುಶ್ ಪ್ರದೇಶವು ಭೂಕಂಪನದ ಕೇಂದ್ರಬಿಂದುವಾಗಿದ್ದು, 180 ಕಿ.ಮೀ ಆಳದಲ್ಲಿ ಭೂಕಂಪ ಆಗಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪ್ರಬಲ ಭೂಕಂಪನ – ಬೆಚ್ಚಿ ಮನೆಯಿಂದಾಚೆ ಓಡಿಬಂದ ಜನ
Advertisement
Advertisement
ಇಸ್ಲಾಮಾಬಾದ್, ಪೇಶಾವರ, ಚಾರ್ಸದ್ದಾ, ಲಾಹೋರ್ ಮತ್ತು ರಾವಲ್ಪಿಂಡಿ ಸೇರಿದಂತೆ ವಿವಿಧ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅಲ್ಲದೇ ಗುಜ್ರಾನ್‌ವಾಲಾ, ಗುಜರಾತ್, ಸಿಯಾಲ್‌ಕೋಟ್, ಕೋಟ್ ಮೊಮಿನ್, ಮಧ್ ರಂಝಾ, ಚಕ್ವಾಲ್, ಕೊಹತ್ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶಗಳಲ್ಲಿಯೂ ಪ್ರಬಲ ಕಂಪನಗಳು ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Advertisement
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪದಿಂದಾಗಿ ಅವಘಡ ಸಂಭವಿಸಿದ್ದು, 100 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ
Advertisement
ಭಾರತದಲ್ಲೂ ಮಂಗಳವಾರ ರಾತ್ರಿ 10:20 ರ ಸುಮಾರು ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಬಲವಾಗಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯಲ್ಲಿ ಭೂಮಿ ಕಂಪಿಸಿದ ಹಿನ್ನಲೆ ಜನರು ಆತಂಕಗೊಂಡು ಮನೆಯಿಂದ ಹೊರ ಓಡಿ ಹೋಗಿದ್ದಾರೆ. ನಿನ್ನೆ ತಡರಾತ್ರಿ ನಡೆದ ಈ ಘಟನೆ ಜನರಲ್ಲಿ ಆತಂಕ ಮತ್ತು ಗೊಂದಲವನ್ನು ಸೃಷ್ಟಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್, ರಜೌರಿ ಸೇರಿದಂತೆ ಎಲ್ಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ. ಪಂಜಾಬ್, ಚಂಡೀಗಢ, ಉತ್ತರಾಖಂಡದಲ್ಲಿ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಜನರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.