ಹೈದರಾಬಾದ್: ಭಾರೀ ಮಂಜಿನಿಂದ ದಾರಿ ಕಾಣದೇ ಬಸ್ (Bus) ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ (Andra Pradesh) ಅಲ್ಲೂರಿ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಅರಣ್ಯದ (Forest) ತಿರುವಿನಲ್ಲಿ ಸಂಚರಿಸುವಾಗ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಪ್ರಕಾರ ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಹೈವೇಗಳಲ್ಲಿ ರಾತ್ರಿ ವಾಹನ ಓಡಿಸೋವಾಗ ಎಚ್ಚರವಾಗಿರಿ – ಗಾಬರಿ ಹುಟ್ಟಿಸುತ್ತೆ ಸರ್ಕಾರಿ ಅಂಕಿ-ಅಂಶಗಳು
Pained by the loss of lives due to a bus mishap in the Alluri Sitharama Raju district of Andhra Pradesh. My thoughts are with the affected people and their families during this difficult time. Praying for the speedy recovery of the injured.
An ex-gratia of Rs. 2 lakh from PMNRF…
— PMO India (@PMOIndia) December 12, 2025
ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಏಳು ಜನರನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಭಾರೀ ಮಂಜಿನಿಂದಾಗಿ ಬಸ್ ಚಾಲಕನಿಗೆ ಅಪಘಾತ ಸ್ಥಳದಲ್ಲಿ ತಿರುವು ಕಾಣಿಸದ ಕಾರಣ ಈ ದುರಂತ ಸಂಭವಿಸಿರುವ ಸಾಧ್ಯತೆಯಿದೆ.
ಚಿತ್ತೂರಿನಿಂದ ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀರಾಮ ದೇವಸ್ಥಾನಕ್ಕೆ ಪ್ರಯಾಣಿಕರು ತೆರಳುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ.,ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.

