ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು, ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ 9 ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1ರಿಂದ ರಸ್ತೆಗಿಳಿಯುವುದಿಲ್ಲ. ಅವುಗಳು ಸೇವೆಯಿಂದ ಹೊರಗುಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ತಿಳಿಸಿದ್ದಾರೆ.
ಉದ್ಯಮ ಸಂಸ್ಥೆ ಎಫ್ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಳೆಯ ವಾಹನಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ. ಎಥೆನಾಲ್, ಮೆಥನಾಲ್, ಬಯೋ-ಸಿಎನ್ಜಿ, ಬಯೋ-ಎಲ್ಎನ್ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಗಮಗೊಳಿಸಲು ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Union Budget 2023: ಮಂಗಳವಾರದಿಂದ ಬಜೆಟ್ ಅಧಿವೇಶನ – ಫೆ. 1ಕ್ಕೆ ಬಜೆಟ್ ಮಂಡನೆ
Advertisement
Advertisement
ನಾವು ಈಗ 15 ವರ್ಷಗಳಿಗಿಂತ ಹೆಚ್ಚು ಹಳೆಯದಾದ ಒಂಭತ್ತು ಲಕ್ಷಕ್ಕೂ ಹೆಚ್ಚು ಸರ್ಕಾರಿ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಅನುಮೋದಿಸಿದ್ದೇವೆ. ಮಾಲಿನ್ಯಕಾರಕ ಬಸ್ಗಳು ಮತ್ತು ಕಾರುಗಳು ರಸ್ತೆಯಿಂದ ಹೊರಗುಳಿಯುತ್ತವೆ. ಪರ್ಯಾಯ ಇಂಧನಗಳೊಂದಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ. ಇದು ವಾಯುಮಾಲಿನ್ಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Advertisement
ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಒಡೆತನದ ಬಸ್ಗಳು ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಡೆತನದ ಎಲ್ಲಾ ವಾಹನಗಳ ನೋಂದಣಿ ರದ್ದುಗೊಳಿಸಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಇತ್ತೀಚಿನ ಅಧಿಸೂಚನೆ ಹೊರಡಿಸಿತ್ತು. ಇದನ್ನೂ ಓದಿ: ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ – ಅವರಿಗೆ ಭಯವಿದೆ: ರಾಹುಲ್ ಗಾಂಧಿ
Advertisement
ದೇಶದ ರಕ್ಷಣೆ, ಕಾನೂನು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆ ನಿರ್ವಹಣೆಯ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಾಹನಗಳಿಗೆ (ಶಸ್ತ್ರಸಜ್ಜಿತ ಮತ್ತು ಇತರ ವಿಶೇಷ ವಾಹನಗಳಿಗೆ) ಈ ನಿಯಮ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k