ಲಕ್ನೋ: 9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ(Uttar Pradesh) ನಡೆದಿದೆ.
ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಗೋರಖ್‌ಪುರ (Gorakhpur) ಜಿಲ್ಲೆಯ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಮಗು ಶುಕ್ರವಾರ ತಡರಾತ್ರಿ ಕಾಣೆಯಾಗಿತ್ತು.
ಮಗು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬದವರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಬೆಳಗ್ಗೆ ಮನೆಯ ಸಮೀಪದ ಜಮೀನೊಂದರಲ್ಲಿ ಮಗು ಪತ್ತೆಯಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕುಟುಂಬ ಸದಸ್ಯರು ಹಾಗೂ ಸಂಬಂಧಿಕರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಂಬಂಧಿಯಾಗಿದ್ದ 12 ವರ್ಷದ ಬಾಲಕನ ಮೇಲೆ ಅನುಮಾನ ವ್ಯಕ್ತವಾಗಿತ್ತು. ಮೂರು ದಿನಗಳ ಹಿಂದೆ ಚಂಡೀಗಢದಿಂದ ಗ್ರಾಮಕ್ಕೆ ಬಂದಿದ್ದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಬಾಲಕ ಅತ್ಯಾಚಾರ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.ಇದನ್ನೂ ಓದಿ: ತೆಲಂಗಾಣದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ; 37 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು
ತನಿಖೆ ವೇಳೆ ಬಾಲಕ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಮತ್ತು ಅನೇಕ ಅಶ್ಲೀಲ ವೆಬ್‌ಸೈಟ್‌ಗಳ ನೋಡಿರುವ ಮಾಹಿತಿ ಪತ್ತೆಯಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ತಮಿಳುನಾಡಿನ ಸೀಫುಡ್ ಘಟಕದಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ; 7 ಕಾರ್ಮಿಕರು ಸಾವು
