ಬೆಂಗಳೂರು: ಓಮಿಕ್ರಾನ್ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.
Advertisement
ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್‌ಟಿ-ಪಿಸಿಆರ್ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ಉಳಿದ 10 ಮಂದಿ ಕಾಣೆಯಾಗಿದ್ದರು. ಅವರು ಏರ್‌ಪೋರ್ಟ್‌ನಲ್ಲಿ ನೀಡಿದ್ದ ವಿಳಾಸ ಪತ್ತೆಯಾಗಿಲ್ಲ. ಅವರ ಫೋನ್‌ಗಳಿಗೆ ಕರೆ ಮಾಡಿದರೆ ಸ್ವಿಚ್ಡ್ ಆಫ್ ಬರುತ್ತಿದೆ ಎಂದು ಸಚಿವರು ಹೇಳಿದ್ದರು. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣಕ್ಕೆ ಟಾಸ್ಕ್‌ಫೋರ್ಸ್- 17 ತಂಡ ರಚನೆ
Advertisement
ನಾಪತ್ತೆಯಾಗಿರುವ ಎಲ್ಲಾ 10 ಜನರನ್ನು ಪತ್ತೆಹಚ್ಚಬೇಕು. ಅವರನ್ನು ಪರೀಕ್ಷೆಗೆ ಒಳಪಡಿಸಬೇಕು. ಅವರ ವರದಿ ಬರುವವರೆಗೆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಬರಲು ಅನುಮತಿಸುವುದಿಲ್ಲ ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದರು. ಇದನ್ನೂ ಓದಿ: ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ 250, ಹಳ್ಳಿಗಳಲ್ಲಿ 100 ರೂ. ದಂಡ ಫಿಕ್ಸ್
Advertisement
Advertisement
ಈ ವೇಳೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, 9 ಮಂದಿ ಪತ್ತೆಯಾಗಿದ್ದಾರೆ. ಮತ್ತೊಬ್ಬನ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.