ಮುಂಬೈ: ನಾಗ್ಪುರ ಕೇಂದ್ರ ಕಾರಾಗೃಹದಲ್ಲಿರುವ ಒಂಬತ್ತು ಕೈದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ನ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಕೊರೊನಾ ವೈರಸ್ ಹೆಚ್ಚಾಗುತ್ತಿದ್ದ ಹಿನ್ನೆಲೆ ನಾಲ್ಕು ದಿನಗಳ ಹಿಂದೆ ಕಾರಾಗೃಹದಲ್ಲಿದ್ದ 12 ಕೈದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ನಾಲ್ಕು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಸೋಂಕಿತರ ಸಂಪರ್ಕದಲ್ಲಿದ್ದ ಅಧಿಕಾರಿಗಳನ್ನು ಪತ್ತೆಹಚ್ಚಲು ಪ್ರಾರಂಭಿಸಲಾಗಿದೆ. ಇದನ್ನೂ ಓದಿ: ಬೀದಿ ನಾಯಿ ಮೇಲೆ ಅತ್ಯಾಚಾರಗೈದ ವೃದ್ಧ
Advertisement
Advertisement
ಈ ನಡುವೆ ಶುಕ್ರವಾರ ಮತ್ತೆ ಐವರು ಕೈದಿಗಳಿಗೆ ಕೋವಿಡ್-19 ಪರೀಕ್ಷೆ ವೇಳೆ ಪಾಸಿಟಿವ್ ಬಂದಿದೆ. ಇದೀಗ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಎಲ್ಲ ಕೈದಿಗಳು ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ಅವರನ್ನು ಕ್ವಾರಂಟೈನ್ಗೊಳಿಸಲಾಗಿದೆ.
Advertisement
ಕಳೆದ 24 ಗಂಟೆಗಳಲ್ಲಿ ನಾಗ್ಪುರದಲ್ಲಿ 65 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರ ಜಿಲ್ಲೆಯಲ್ಲಿ 1,899 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಐವರು ಕೈದಿಗಳು ಸೇರಿದಂತೆ 65 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ