ನವದೆಹಲಿ: ದೆಹಲಿ, ಮುಂಬೈ ಸೇರಿದಂತೆ ದೇಶದ ಹಲವೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಡಾನ್ ದಾವೂದ್ ಇಬ್ರಾಹಿಂ (Dawood Ibrahim) ಜೊತೆ ನಿಕಟ ಸಂಪರ್ಕ ಹೊಂದಿದ್ದ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ದೆಹಲಿ, ಮುಂಬೈ ಮತ್ತು ಪಂಜಾಬ್ ನಿವಾಸಿಗಳು ಮತ್ತು ಕೆಲವರು ವಿದೇಶಿ ಪ್ರಜೆಗಳು ಎಂದು ದೆಹಲಿ ಪೊಲೀಸರ ವಿಶೇಷ ಘಟಕ ತಿಳಿಸಿದೆ. ಬಂಧಿತರಿದ ಅಪಾರ ಪ್ರಮಾಣದ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರಮಾಣು ಸ್ಥಾವರ, ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ನಡೆಸುವ ಸಂಚು ಬಂಧಿತರ ಪಟ್ಟಿಯಲ್ಲಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕ ವಾಯುನೆಲೆ ಮೇಲೆ ಇರಾನ್ ಮಿಸೈಲ್ ದಾಳಿ – ಅತ್ಯಾಧುನಿಕ MQ-9 ರೀಪರ್ ಡ್ರೋನ್‌ಗಳಿಗೆ ಹಾನಿ
ಬಂಧಿತರಿಗೆ ಇರುವ ಗಡಿಯಾಚೆಗಿನ ಸಂಪರ್ಕಗಳು, ಹಣಕಾಸಿನ ಮಾರ್ಗಗಳು ಮತ್ತು ಮಾಡ್ಯೂಲ್‌ನ ಚಟುವಟಿಕೆಗಳನ್ನು ನಿರ್ದೇಶಿಸುವಲ್ಲಿ ವಿದೇಶಿ ನಿರ್ವಾಹಕರ ಪಾತ್ರವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಭಯೋತ್ಪಾದಕ ದಾಳಿ ಬಗ್ಗೆ ಸಂಚು ರೂಪಿಸಿದ್ದ ಕುರಿತು ಗುಪ್ತಚರ ಮಾಹಿತಿ ಬಳಿಕ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಎಲ್ಲಾ ಜಿಲ್ಲಾ ಘಟಕಗಳು ಜಾಗರೂಕರಾಗಿರಲು ಮತ್ತು ಗುಪ್ತಚರ ಸಂಸ್ಥೆಗಳು ಮತ್ತು ಕೇಂದ್ರ ಅರೆಸೈನಿಕ ಪಡೆಗಳೊಂದಿಗೆ ನಿಕಟ ಸಮನ್ವಯವನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಇದನ್ನೂ ಓದಿ: ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶ
